ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶಾಸಕರು, ಸಂಸದರು ಹಾಗೂ ಎಮ್‌ಎಲ್‌ಸಿಗಳು ತಮ್ಮ ವ್ಯಾಪ್ತಿಯ 3 ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅಭಿವೃದ್ಧಿಪಡಿಸುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಇಂದು ನಗರದ ಡಯೇಟ್ ಕಾಲೇಜಿನಲ್ಲಿ ಬೆಂಗಳೂರು ವಿ.ವಿ ವಿಶ್ರಾಂತ ಕುಲಪತಿ ಹಾಗೂ ಶೈಕ್ಷಣಿಕ ಸುಧಾರಣೆಗಳ ಸಮಿತಿ ಸದಸ್ಯರಾದ ಸಿದ್ದಪ್ಪ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಎಸ್. ರುದ್ರೇಗೌಡ್ರು, ಕುವೆಂಪು ವಿವಿ ಯ ಕುಲಪತಿ ವೀರಭದ್ರಪ್ಪ, ಮಂಜುನಾಥ, ಶಿವಮೊಗ್ಗ DDPI ಎನ್.ಎಮ್ ರಮೇಶ, ಡಯೆಟ್ ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ ಹಾಗೂ ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post