No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Monday, March 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 31, 2019
in Small Bytes, ಶಿವಮೊಗ್ಗ
0
ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ, ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖಾ ಸಚಿವರನ್ನು ಜಿಲ್ಲೆಗೆ ಆಹ್ವಾನಿಸಿ, ಅವರ ಸಮ್ಮುಖದಲ್ಲಿ ಚರ್ಚಿಸಿ, ಅಗತ್ಯ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗುವುದು ಎಂದು ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಪಂಚಾಯತ್‍ರಾಜ್ ಇಲಾಖೆಗೆ ಸಂಬಂಧಿಸಿದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇಲಾಖೆಯಲ್ಲಿನ ಸಿಬ್ಬಂದಿಗಳ ಕೊರತೆಯನ್ನು ನೀಗಿಸಲು ನಿವೃತ್ತ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಲಾಗುವುದೆಂದವರು ಎಂದರು.

ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆಯನ್ನು ಇತ್ಯರ್ಥಪಡಿಸಲು ಜಿಲ್ಲೆಯಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳಿಗೆ ಅಗತ್ಯವಿರುವ ಅನುದಾನವನ್ನು ಒಂದು ತಿಂಗಳ ಅವಧಿಯೊಳಗಾಗಿ ಬಿಡುಗಡೆಗೊಳಿಸಲಾಗುವುದೆಂದ ಅವರು, ಜಿಲ್ಲೆಯಲ್ಲಿ ಈಗಾಗಲೇ ನಿರ್ಮಿಸಲು ಉದ್ದೇಶಿಸಲಾಗಿರುವ 241ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮುಂದಿನ ಹದಿನೈದು ದಿನಗಳೊಳಗಾಗಿ ಪೂರ್ಣಗೊಳಿಸಿ ಮಾಹಿತಿ ನೀಡಬೇಕು. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಕ್ಷಮಿಸಲಾಗುವುದಿಲ್ಲ ಅಲ್ಲದೇ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲಾ ಮತ್ತು ಅಂಗನವಾಡಿ ಕಟ್ಟಡಗಳ ಸರ್ವಾಂಗೀಣ ವಿಕಾಸಕ್ಕಾಗಿ ಸ್ಥಳೀಯ ಸಂಸ್ಥೆಗಳು ಹಾಗೂ ಖಾಸಗಿ ಕೊಡುಗೈ ದಾನಿಗಳಿಂದ ಸಹಕಾರದೊಂದಿಗೆ ಅಭಿವೃದ್ದಿಪಡಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಅನೇಕ ಸಂಘ-ಸಂಸ್ಥೆಗಳು ಸಹಕಾರ ನೀಡುವುದಾಗಿ ಭರವಸೆ ನೀಡಿವೆ. ಶಿವಮೊಗ್ಗ ನಗರದಲ್ಲಿ ಈಗಾಗಲೇ ಸಭೆ ನಡೆಸಿ, ಕಟ್ಟಡಗಳ ದುರಸ್ತಿಯ ಅಂದಾಜುಪಟ್ಟಿ ತಯಾರಿಸಲಾಗಿದೆ. ಅದೇ ರೀತಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಸಭೆಗಳನ್ನು ನಡೆಸಿ, ಕಟ್ಟಡ ದುರಸ್ತಿಗಾಗಿ ಯತ್ನಿಸಲಾಗುವುದೆಂದವರು ಎಂದರು.

ಜಿಲ್ಲೆಯಲ್ಲಿ ಮಳೆಹಾನಿಯಿಂದ ಒಡೆದುಹೋಗಿರುವ ಕೆರೆಕಟ್ಟೆ ಕಾಲುವೆಗಳ ದುರಸ್ತಿಗೊಳಿಸಿ, ನೀರನ್ನು ಸಂಗ್ರಹಿಸುವ ತುರ್ತು ಅಗತ್ಯವಿದೆ. ಇದು ಮುಂದೆ ಗಂಭೀರ ಸ್ವರೂಪದ ಸಮಸ್ಯೆಗಳನ್ನು ಸೃಷ್ಟಿಸಬಹುದಾಗಿದೆ. ಆದ್ದರಿಂದ ಅವುಗಳ ದುರಸ್ತಿಗೆ ಅಗತ್ಯ ಅನುದಾನ ಮಂಜೂರು ಮಾಡುವಂತೆ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರ ಕೋರಿಕೆಗೆ ಸಚಿವರು ಅಗತ್ಯ ಅನುದಾನ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದರು.

ಈಗಾಗಲೇ ಜಿಲ್ಲೆಯಲ್ಲಿ ಶಿಥಿಲವಾಗಿರುವ ಶಾಲಾ ಕಟ್ಟಡಗಳ ದುರಸ್ತಿ ಹಾಗೂ ನೂತನ ಕಟ್ಟಡ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಅನುದಾನವನ್ನು ಬಳಸಿಕೊಂಡು ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಕಡಿಮೆ ಮೊತ್ತದ ಕಾಮಗಾರಿಗಳನ್ನು ಮೊದಲು ಪೂರ್ಣಗೊಳಿಸಿ, ನಂತರ ಹೆಚ್ಚಿನ ಮೊತ್ತವನ್ನು ನಿರೀಕ್ಷಿಸುವ ಕಾಮಗಾರಿಗಳನ್ನು ನಂತರದ ಹಂತಕ್ಕೆ ಬೇಡಿಕೆ ಪಟ್ಟಿಯನ್ನು ಸಲ್ಲಿಸುವಂತೆ ಅವರು ಸೂಚಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ನೆರವಿನಿಂದ 2012ರಲ್ಲಿ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಕೋಟ್ಯಾಂತರ ರೂ.ಗಳ ಅನುದಾನ ಬಿಡುಗಡೆಯಾಗಿದ್ದರೂ ಇನ್ನೂ ಅನೇಕ ಕಟ್ಟಡಗಳು ಪೂರ್ಣಗೊಳ್ಳದೇ ಹಾಗೆ ಉಳಿದಿವೆ. ಇನ್ನೂ ಕೆಲವು ಕಟ್ಟಡಗಳ ಕಾಮಗಾರಿಗಳೇ ಆರಂಭಗೊಂಡಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಸಚಿವರ ಗಮನಕ್ಕೆ ತಂದರು. ಅದಕ್ಕೆ ಸಚಿವರು ಈ ಸಂಬಂಧ ಗುತ್ತಿಗೆದಾರರು ಹಾಗೂ ಇಲಾಖೆಯ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಿ ತ್ವರಿತವಾಗಿ ಕಟ್ಟಡ ನಿರ್ಮಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿಕೊಡಲು ಸೂಚಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಹಾನಗರಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ 4836ಮನೆಗಳ ನಿರ್ಮಾಣಕ್ಕೆ ರಾಜೀವಗಾಂಧಿ ವಸತಿ ಯೋಜನೆಯಡಿ ಮಂಜೂರಾತಿ ದೊರೆತಿದ್ದು, ಅದಕ್ಕೆ ಪೂರಕವಾಗಿ ಫಲಾನುಭವಿಗಳು ಇಲ್ಲದಿರುವುದರಿಂದ ಸದ್ಯ ಅರ್ಜಿ ಸಲ್ಲಿಸಿರುವ ನಗರ ಆಶ್ರಯ ಮನೆಗಳ ನಿರ್ಮಾಣಕ್ಕೆ ಕ್ರಮವಹಿಸುವುದಾಗಿ ತಿಳಿಸಿದರು. ಆಗ ಸಚಿವರು ಉಳಿದ ಮನೆ ನಿರ್ಮಾಣಕ್ಕೆ ಅನುಕೂಲವಾಗುವಂತೆ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸುವಂತೆ ಆಯುಕ್ತರಿಗೆ ಸೂಚಿಸಿದರು. ಉಳಿದಂತೆ ಸಿದ್ಲೀಪುರದಲ್ಲಿ ಕೈಗಾರಿಕಾ ಕಾರ್ಮಿಕರಿಗಾಗಿ ಕಾಯ್ದಿರಿಸಲಾಗಿರುವ ಜಾಗದಲ್ಲಿ ಮನೆಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಎಸ್.ಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ವೇದಾವಿಜಯಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜ್, ಮಹಾನಗರಪಾಲಿಕೆ ಮಹಾಪೌರರಾದ ಶ್ರೀಮತಿ ಲತಾಗಣೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಶಾಸಕರು ಉಪಸ್ಥಿತರಿದ್ದರು.

Tags: Department of Panchayat and Rural DevelopmentDevelopmental WorksKannada NewsMalnad NewsMinister K S EshwarappaShivamoggaಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಶಿವಮೊಗ್ಗಸಚಿವ ಕೆ.ಎಸ್.ಈಶ್ವರಪ್ಪ
Share197Tweet123Send
Previous Post

ಭದ್ರಾವತಿಯ ಛಲಬಿಡದ ತ್ರಿವಿಕ್ರಮ ಮಣ್ಣಿನಮೂರ್ತಿ ತಯಾರಕ ಕಲಾವಿದ ಬಸವರಾಜ್

Next Post

ಒಂದು ವರ್ಷದಲ್ಲಿ ಶಿವಮೊಗ್ಗ ಏರ್’ಪೋರ್ಟ್ ಕಾರ್ಯಾರಂಭಕ್ಕೆ ಯೋಜನೆ, ರಿಂಗ್ ರಸ್ತೆ ಅಭಿವೃದ್ಧಿಗೆ ಚಾಲನೆ: ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒಂದು ವರ್ಷದಲ್ಲಿ ಶಿವಮೊಗ್ಗ ಏರ್’ಪೋರ್ಟ್ ಕಾರ್ಯಾರಂಭಕ್ಕೆ ಯೋಜನೆ, ರಿಂಗ್ ರಸ್ತೆ ಅಭಿವೃದ್ಧಿಗೆ ಚಾಲನೆ: ಸಿಎಂ ಯಡಿಯೂರಪ್ಪ

ಒಂದು ವರ್ಷದಲ್ಲಿ ಶಿವಮೊಗ್ಗ ಏರ್’ಪೋರ್ಟ್ ಕಾರ್ಯಾರಂಭಕ್ಕೆ ಯೋಜನೆ, ರಿಂಗ್ ರಸ್ತೆ ಅಭಿವೃದ್ಧಿಗೆ ಚಾಲನೆ: ಸಿಎಂ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL