ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ/ರಾಜ್ಯ ಸರ್ಕಾರದ ಆದೇಶದಂತೆ ದಿ: 16-07-2022 ರಿಂದ 30-09-2022 ರವರೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆಯನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ಸೆ.30ರಂದು ಲಸಿಕೆ ನೀಡಲು ಕೊನೆಯ ದಿನವಾಗಿರುತ್ತದೆ.
ಆದ್ದರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರು ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
Also read: ಮಡಿಕೇರಿ ಆಕಾಶವಾಣಿಯಿಂದ ನಡೆದ ಭಾಷಣ ಸ್ಪರ್ಧೆ ಯಶಸ್ವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post