ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೋಗಾನೆ ವಿಮಾನ ನಿಲ್ದಾಣದಲ್ಲಿ ನಾಗರೀಕ ವಿಮಾನಯಾನ ಸಂಚಾರ ಆರಂಭವಾದ ಕೆಲವೇ ತಿಂಗಳುಗಳ ಬೆನ್ನಲ್ಲೇ ಮತ್ತೊಂದು ಮಹತ್ವದ ಹೆಜ್ಜೆಯಿಡಲಾಗಿದ್ದು, ಇಂಡಿಗೋ ವಿಮಾನದ ಜೊತೆಯಲ್ಲಿ ಸ್ಟಾರ್ ಏರ್ ಲೈರ್ ಲೈನ್ಸ್ ಕೂಡಾ ಸಂಚಾರ ಆರಂಭ ಮಾಡಲಿದೆ.
ಹೌದು… ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಲೈನ್ಸ್ ವಿಮಾನ ಹಾರಾಟಕ್ಕೆ ದಿನಾಂಕ ನಿಗದಿಯಾಗಿದ್ದು, ತಿರುಪತಿ, ಗೋವಾ ಹಾಗೂ ಹೈದರಾಬಾದ್’ಗೆ ಮಾರ್ಗಗೆ ಸಂಚಾರ ನಡೆಸಲಿದೆ.
ಶಿವಮೊಗ್ಗದಿಂದ ತಿರುಪತಿ, ಗೋವಾ, ಹೈದರಾಬಾದ್’ಗೆ ನೇರವಾಗಿ ಅತ್ಯಂತ ವೇಗವಾಗಿ ತಲುಪಬಹುದಾಗಿದ್ದು, ಇದಕ್ಕಾಗಿ ಸಿದ್ದತೆಗಳು ಅಂತಿಮಗೊಂಡಿದೆ.
ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್’ಗೆ ವಾರದಲ್ಲಿ ಆರು ದಿನ ವಿಮಾನಯಾನ ಸೇವೆ ಆರಂಭಿಸುತ್ತಿದೆ. ನವೆಂಬರ್ 17ರಿಂದ ಸ್ಟಾರ್ ಏರ್ ತನ್ನ ಸೇವೆ ಆರಂಭಿಸುತ್ತಿದೆ.
ಟೈಮಿಂಗ್ ಏನು?
ಬೆಳಗ್ಗೆ 9.30ಕ್ಕೆ ಹೈದರಾಬಾದ್’ನಿಂದ ಹೊರಟು ಬೆಳಗ್ಗೆ 10.35ಕ್ಕೆ ಶಿವಮೊಗ್ಗ ತಲುಪಲಿದೆ.
ಬೆಳಗ್ಗೆ 11ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12ಕ್ಕೆ ತಿರುಪತಿ ತಲುಪಲಿದೆ.
ತಿರುಪತಿಯಿಂದ ಮಧ್ಯಾಹ್ನ 12.35ಕ್ಕೆ ಹೊರಟು ಮಧ್ಯಾಹ್ನ 1.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ.
ಮಧ್ಯಾಹ್ನ 1.55ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 2.45ಕ್ಕೆ ಗೋವಾ ತಲುಪಲಿದೆ.
ಗೋವಾದಿಂದ ಮಧ್ಯಾಹ್ನ 3.15ಕ್ಕೆ ಹೊರಟು ಸಂಜೆ 4.05ಕ್ಕೆ ಶಿವಮೊಗ್ಗ ತಲುಪಲಿದೆ.
ಸಂಜೆ 4.30ಕ್ಕೆ ಶಿವಮೊಗ್ಗದಿಂದ ಹೊರಟು ಸಂಜೆ 5.30ಕ್ಕೆ ಹೈದರಾಬಾದ್ ತಲುಪಲಿದೆ.
ಬುಕಿಂಗ್ ಯಾವಾಗಿನಿಂದ?
ಸ್ಟಾರ್ ಏರ್’ಲೈನ್ಸ್ ಸಂಸ್ಥೆ ವಿಮಾನಯಾನ ಸೇವೆ ಆರಂಭಕ್ಕೆ ದಿನಾಂಕ ಪ್ರಕಟಿಸುತ್ತಿದ್ದಂತೆ ಟಿಕೆಟ್ ಬುಕಿಂಗ್ ಪ್ರಕ್ರಿಯೆ ಕೂಡ ಆರಂಭವಾಗಿದೆ. ಆನ್ ಲೈನ್’ನಲ್ಲಿ ಟಿಕೇಟ್ ಬುಕಿಂಗ್ ಮಾಡಬಹುದಾಗಿದೆ.
Also read: ರಂಗಭೂಮಿ ಪ್ರೀತಿ, ಸಾಮರಸ್ಯ, ಸಮಾನತೆಯನ್ನು ಕಲಿಸುತ್ತದೆ: ನಟ ದೊಡ್ಡಣ್ಣ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post