ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶಕುಮಾರ ಹೊಸಮನಿ ಇವರು ಡಿ.19 ರಂದು ತೀರ್ಥಹಳ್ಳಿ ತಾಲ್ಲೂಕಿನ ಕುವೆಂಪು ಸ್ಮಾರಕ ಶಾಖಾ ಗ್ರಂಥಾಲಯ, ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಶಿವಮೊಗ್ಗ ತಾಲ್ಲೂಕಿನ ಗಾಜನೂರು ಗ್ರಾಮ ಪಂಚಾಯತಿ ಗ್ರಂಥಾಲಯವನ್ನು ವೀಕ್ಷಣೆ ಮಾಡಿ ನಂತರ ಶಿವಮೊಗ್ಗ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ ಡಿಜಿಟಲ್ ಗ್ರಂಥಾಲಯ ಸದಸ್ಯರ ನೊಂದಣಿ ಪ್ರಕ್ರಿಯೆ ಬಗ್ಗೆ ಮಾತನಾಡಿ, ಸದ್ಯ ಜಿಲ್ಲೆಯಲ್ಲಿ 5,55,469 ಜನ ನೋಂದಣಿಯಾಗಿದ್ದಾರೆ. ಇನ್ನೂ ಹೆಚ್ಚಿನ ನೊಂದಣಿ ಮಾಡುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರಾದ ವೆಂಕಟೇಶ ಸಿ.ಜೆ ಹಾಗೂ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಯಾದ ಹರೀಶ್ ಎಂ.ಆರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post