ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೇಂದ್ರ ಬಿಜೆಪಿ ಸರ್ಕಾರ ದೇಶಾದ್ಯಂತ ಎರಡು ಕೊರೋನಾ ಅಲೆಗಳನ್ನು ಸಮರ್ಪಕವಾಗಿ ನಿಭಾಯಿಸದೆ ಮತ್ತು ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವುದು ಹಾಗೂ ಶಿವಮೊಗ್ಗ ನಗರದಲ್ಲಿ ದಿಡೀರ್ ಲಸಿಕಾ ಅಭಿಯಾನವನ್ನು ಸ್ಥಗಿತಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಕುವೆಂಪು ರಸ್ತೆಯ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರ ಲಸಿಕಾ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಆರ್ ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್, ಪದಾಧಿಕಾರಿಗಳಾದ ಉಮೇಶ್ ಬಾಳೆಗುಂಡಿ, ಅರುಣ್ ನವುಲೆ, ವೆಂಕಟೇಶ್ ಕಲ್ಲೂರು, ರಾಹುಲ್ ಸೀಗೆಹಟ್ಟಿ, ಶ್ರೀನಿವಾಸ್, ಪವನ್, ರಾಕೇಶ್, ಇರ್ಫಾನ್, ಕ್ಲೇಮೆಂಟ್ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post