ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೈಪೋಟಿ ಜಾಸ್ತಿ ಇದ್ದಾಗ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ವರಿಷ್ಠರೊಂದಿಗೆ ಚರ್ಚೆ ನಡೆಸಿ ಸೂಕ್ತ ಅಭ್ಯರ್ಥಿಯಲ್ಲಿ ಕಣಕ್ಕೆ ಇಳಿಸಲಾಗುವುದು ಎಂದರು.
ಕೇವಲ ಉಡಾಫೆ ಮಾಡಿಕೊಂಡು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಅವರಲ್ಲಿ ಬಣ ರಾಜಕೀಯ ಇರುವುದು ಎಲ್ಲರಿಗೂ ಗೊತ್ತಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದರು.
ಕೆ.ಎನ್. ರಾಜಣ್ಣ, ನಟ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆಯುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಎಲ್ಲರೂ ಅವರನ್ನು ಕರೆಯುತ್ತಾರೆ, ಹೋಗೋದು ಬಿಡೋದು ಅವರಿಗೆ ಬಿಟ್ಟ ವಿಚಾರ. ಸುದೀಪ್ ಅವರೇ ಹೇಳಿದ್ದಾರೆ ನನ್ನ ಕಷ್ಟ ಕಾಲದಲ್ಲಿ ಯಾರು ಕೈಹಿಡಿಯಲಿಲ್ಲ. ಬೊಮ್ಮಾಯಿ ಕೈಹಿಡಿದಿದ್ದರು ಸಹಾಯ ಮಾಡ್ತೀನಿ ಎಂದಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಕುಮಠಳ್ಳಿ ಸೋಲಿನ ಕುರಿತು ಲಕ್ಷಣ ಸವದಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸವದಿ ಜೊತೆ ಮಾತನಾಡಿದ್ದೇನೆ. ಅವರು ಡಿಸಿಎಂ ಆಗಿದ್ದವರು, ಎಲ್ಲವೂ ಅರ್ಥ ಆಗುತ್ತದೆ. ಸವದಿ ಕೂಡ ಪಕ್ಷದ ಹಿರಿಯ ನಾಯಕರು. ಅವರಿಗೂ ಜವಾಬ್ದಾರಿ ಇದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post