ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯದ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ನಗರದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿ ಅವರ ಮನೆ ಮುತ್ತಿಗೆ ಹಾಕಲಾಗುವುದು ಎಂದು ಯುವ ಕಾಂಗ್ರೆಸ್ ಆಗ್ರಹಿಸಿದೆ.
ಪ್ರತಿಭಟನೆಯಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ನಿಕಟಪೂರ್ವಾಧ್ಯಕ್ಷ ಎಂ. ಪ್ರವೀಣ್ ಕುಮಾರ್, ರಾಜ್ಯ ಕಾರ್ಯದರ್ಶಿ ಆರ್. ಕಿರಣ್, ಶಿವಮೊಗ್ಗ ನಗರಾಧ್ಯಕ್ಷ ಬಿ. ಲೋಕೇಶ್, ಪದಾಧಿಕಾರಿಗಳಾದ ಕುಮರೇಶ್, ಪುಷ್ಪಕ್ ಕುಮಾರ್, ಅರುಣ್ ನವುಲೆ, ಜಮೀಲ್, ಮಹೇಂದ್ರ ಜೈನ್, ಪವನ್, ರಾಕೇಶ್, ಗಗನ್, ಪರಶುರಾಮ್, ಮಸ್ತಾನ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post