No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾವೇರಿ ಸಮಸ್ಯೆ ಉಲ್ಭಣಗೊಳ್ಳಲು ಕಾರಣರಾದ ಡಿ.ಕೆ. ಶಿವಕುಮಾರ್ ಅವರನ್ನು ವಜಾಗೊಳಿಸಿ

ಡಿಸಿಎಂ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗುಡುಗು

kalpa News by kalpa News
September 22, 2023
in ಶಿವಮೊಗ್ಗ
0
ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

File Photo

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕಾವೇರಿ ನದಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ DKShivakumar ಅವರೇ ಕಾರಣ. ಅವರನ್ನು ತಕ್ಷಣವೇ ಡಿಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ KSEshwarappa ಗುಡುಗಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಕುಡಿಯುವ ನೀರಿಗೂ ಹಾಹಾಕಾರವಿದೆ. ಬರಗಾಲ ಕಾಲಿಟ್ಟಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಇಂಡಿಯಾ(ಐ.ಎನ್.ಡಿ.ಐ.ಎ.) ಮೈತ್ರಿಕೂಟಕ್ಕೆ, ತಮಿಳುನಾಡು ಸಿಎಂ ಸ್ಟಾಲಿನ್ Tamilunadu CM Stalin ಅವರಿಗೆ ತೃಪ್ತಿ ತರಿಸಲು ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ ಎಂದು ಆರೋಪಿಸಿದರು.
ನೀರು ಬಿಡುವ ಮುನ್ನ ಯಾರಿಗೂ ಹೇಳಲಿಲ್ಲ. ಸರ್ವ ಪಕ್ಷಗಳ ಸಭೆ ಕರೆಯಲಿಲ್ಲ. ರೈತರ ಸಂಕಷ್ಟ ಅರ್ಥ ಮಾಡಿಕೊಳ್ಳಲಿಲ್ಲ. ತಾವೇ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಮೂರ್ಖತನದಿಂದ ನೀರು ಬಿಟ್ಟಿದ್ದಾರೆ ಎಂದು ಆರೋಪಿಸಿದರು.

Also read: ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ   

ತಜ್ಞರ ಸಭೆ ಕರೆಯಬಹುದಿತ್ತು. ಸಂಸದರ ಸಭೆ ಕರೆಯಬಹುದಿತ್ತು. ಆದರೆ, ಯಾರನ್ನೂ ಕೇಳಲಿಲ್ಲ. ಸರ್ವಪಕ್ಷಗಳ ಸಭೆ ಕರೆದು ಚರ್ಚೆ ಮಾಡಬಹುದಿತ್ತು. ಆದರೆ, ಚರ್ಚಿಸಲಿಲ್ಲ. ದೆಹಲಿಗೆ ಹೋಗಿ ಸಂಸದರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ಎಂಪಿಗಳಿಂದ ಛೀಮಾರಿ ಹಾಕಿಸಿಕೊಂಡರು. ಈ ಎಲ್ಲಾ ಹಿನ್ನಲೆಯಲ್ಲಿ ಡಿ.ಕೆ. ಶಿವಕುಮಾರ್, ತಮ್ಮ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ನೀರು ಕಳ್ಳನನ್ನು ಕಳ್ಳ ಎನ್ನದೇ ಬೇರೇನು ಹೇಳಬೇಕು?
ಡಿ.ಕೆ. ಶಿವಕುಮಾರ್ ರಾತ್ರೋರಾತ್ರಿ ಕದ್ದು ನೀರು ಬಿಟ್ಟವರು. ಇಂತಹ ನೀರು ಕಳ್ಳನನ್ನು ಕಳ್ಳ ಎನ್ನದೇ ಬೇರೇನು ಹೇಳಬೇಕು. ಡಿಕೆಶಿ ಕಳ್ಳ ನೀರುಗಂಟಿ. ಅದಕ್ಕಾಗಿ ನಾನೇಕೆ ಅವರನ್ನು ಕ್ಷಮೆ ಕೇಳಬೇಕು. ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಡಿ.ಕೆ. ಶಿವಕುಮಾರ್ ಸೆಟ್ಲ್ ಮೆಂಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅವರು ಯಾರು ಸೆಟ್ಲ್ ಮೆಂಟ್ ಮಾಡಲು. ನಾನೇ ಸೆಟ್ಲ್ ಮೆಂಟ್ ಮಾಡಬಲ್ಲೆ. ಅವರಿಗಿಂತ ಮೊದಲೇ ನಾನು ಡಿಸಿಎಂ ಆದವನು. ಗೂಂಡಾಗಳು ಬಳಸುವ ಭಾಷೆ ಇದು. ಅವರು ಜೈಲಿನಲ್ಲಿ ಇದ್ದು ಬಂದಿದ್ದನ್ನು ಮರೆತಿದ್ದಾರೆ. ಅಕ್ಷರಶಃ ಕಾಂಗ್ರೆಸ್ ಆಡಳಿತ ರಾಜ್ಯದಲ್ಲಿ ಕುಸಿದಿದೆ. ಗುಂಪುಗಾರಿಕೆ ಹೆಚ್ಚಾಗಿದೆ.
ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವರು
ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಇಂತಹುದೇ ಪರಿಸ್ಥಿತಿ ಉಂಟಾಗಿತ್ತು. ಆದರೆ, ಅವರು ಸಮರ್ಥವಾಗಿ ಪರಿಸ್ಥಿತಿ ಎದುರಿಸಿದರು. ಆಗ ಅವರಿಗೆ ಎಲ್ಲಾ ವಿಪಕ್ಷಗಳು ಬೆಂಬಲ ಕೊಟ್ಟಿದ್ದೆವು. ನಾವು ಕೂಡ ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜೈಲಿಗೆ ಹೋದರೆ ನಾವು ಅವರ ಜೊತೆಗಿರುತ್ತೇವೆ ಎಂದರು.
ಕಾವೇರಿ ಎಂದರೆ ಕಾಂಗ್ರೆಸ್ ಪಕ್ಷದ ಸ್ವತ್ತಲ್ಲ, ಯಾವುದೇ ನಿರ್ಧಾರ ತೆಗೆದುಕೊಳ್ಳಲು ಡಿ.ಕೆ. ಶಿವಕುಮಾರ್ ಒಬ್ಬರೇ ಇಲ್ಲ. ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ವಜಾ ಮಾಡಬೇಕು. ರಾಜ್ಯದ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಮುಂದಾಗಬೇಕು. ವಸ್ತುಸ್ಥಿತಿಯ ಅಧ್ಯಯನ ಮಾಡಿ ನೀರಾವರಿ ತಜ್ಞರ ಸಲಹೆ ಪಡೆದು ಅಗತ್ಯ ಕ್ರಮ ತೆಗೆದುಕೊಂಡು ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.  ಮೇಘರಾಜ್ ಮಾತನಾಡಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಮನೆಗಳಿಗೆ ಅರ್ಜಿ ಹಾಕಿದವರ ಗೋಳು ಹೇಳತೀರದಾಗಿದೆ. ಬಿಜೆಪಿ ಆಡಳಿತದಲ್ಲಿದ್ದಾಗ ಸಚಿವ ಈಶ್ವರಪ್ಪ ಅವರು ಗೋವಿಂದಾಪುರ ಮತ್ತು ಗೋಪಿಶೆಟ್ಟಿ ಕೊಪ್ಪದಲ್ಲಿ ಸುಮಾರು 4800 ಮನೆಗಳನ್ನು ನಿರ್ಮಿಸಲು ಪ್ರಯತ್ನಿಸಿದ್ದರು. ಕೆಲಸವೂ ನಡೆಯುತ್ತಿತ್ತು. ಆದರೆ ಈಗ ಸಂಪೂರ್ಣವಾಗಿ ನಿಂತಿದೆ. ರಾಜ್ಯ ಸರ್ಕಾರ ಕೂಡಲೇ ಗಮನಹರಿಸಿ ಹಣ ಬಿಡುಗಡೆ ಮಾಡಿ ಬಡವರಿಗೆ ಸೂರು ನೀಡಬೇಕು. ಇಲ್ಲದಿದ್ದರೆ ಅ. 5 ರ ನಂತರ ಜಿಲ್ಲೆಯಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಶಿವಕುಮಾರ್, ಜ್ಞಾನೇಶ್ವರ್, ಶಿವರಾಜ್, ಜಗದೀಶ್, ವಿಶ್ವಾಸ್, ಅಣ್ಣಪ್ಪ, ಬಾಲು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
https://kalpa.news/wp-content/uploads/2023/05/VID-20230516-WA0005.mp4

  

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ   

Next Post

ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಮುಖ್ಯ: ತಹಶೀಲ್ದಾರ್ ಹುಸೇನ್ ಸರಕಾವಸ್ ಅಭಿಪ್ರಾಯ

kalpa News

kalpa News

Next Post
ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಮುಖ್ಯ: ತಹಶೀಲ್ದಾರ್ ಹುಸೇನ್ ಸರಕಾವಸ್ ಅಭಿಪ್ರಾಯ

ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಮುಖ್ಯ: ತಹಶೀಲ್ದಾರ್ ಹುಸೇನ್ ಸರಕಾವಸ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL