ಕಾವೇರಿ ನದಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ DKShivakumar ಅವರೇ ಕಾರಣ. ಅವರನ್ನು ತಕ್ಷಣವೇ ಡಿಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ KSEshwarappa ಗುಡುಗಿದ್ದಾರೆ.
Also read: ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ
ತಜ್ಞರ ಸಭೆ ಕರೆಯಬಹುದಿತ್ತು. ಸಂಸದರ ಸಭೆ ಕರೆಯಬಹುದಿತ್ತು. ಆದರೆ, ಯಾರನ್ನೂ ಕೇಳಲಿಲ್ಲ. ಸರ್ವಪಕ್ಷಗಳ ಸಭೆ ಕರೆದು ಚರ್ಚೆ ಮಾಡಬಹುದಿತ್ತು. ಆದರೆ, ಚರ್ಚಿಸಲಿಲ್ಲ. ದೆಹಲಿಗೆ ಹೋಗಿ ಸಂಸದರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ಎಂಪಿಗಳಿಂದ ಛೀಮಾರಿ ಹಾಕಿಸಿಕೊಂಡರು. ಈ ಎಲ್ಲಾ ಹಿನ್ನಲೆಯಲ್ಲಿ ಡಿ.ಕೆ. ಶಿವಕುಮಾರ್, ತಮ್ಮ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ನೀರು ಕಳ್ಳನನ್ನು ಕಳ್ಳ ಎನ್ನದೇ ಬೇರೇನು ಹೇಳಬೇಕು?ಡಿ.ಕೆ. ಶಿವಕುಮಾರ್ ರಾತ್ರೋರಾತ್ರಿ ಕದ್ದು ನೀರು ಬಿಟ್ಟವರು. ಇಂತಹ ನೀರು ಕಳ್ಳನನ್ನು ಕಳ್ಳ ಎನ್ನದೇ ಬೇರೇನು ಹೇಳಬೇಕು. ಡಿಕೆಶಿ ಕಳ್ಳ ನೀರುಗಂಟಿ. ಅದಕ್ಕಾಗಿ ನಾನೇಕೆ ಅವರನ್ನು ಕ್ಷಮೆ ಕೇಳಬೇಕು. ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಡಿ.ಕೆ. ಶಿವಕುಮಾರ್ ಸೆಟ್ಲ್ ಮೆಂಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅವರು ಯಾರು ಸೆಟ್ಲ್ ಮೆಂಟ್ ಮಾಡಲು. ನಾನೇ ಸೆಟ್ಲ್ ಮೆಂಟ್ ಮಾಡಬಲ್ಲೆ. ಅವರಿಗಿಂತ ಮೊದಲೇ ನಾನು ಡಿಸಿಎಂ ಆದವನು. ಗೂಂಡಾಗಳು ಬಳಸುವ ಭಾಷೆ ಇದು. ಅವರು ಜೈಲಿನಲ್ಲಿ ಇದ್ದು ಬಂದಿದ್ದನ್ನು ಮರೆತಿದ್ದಾರೆ. ಅಕ್ಷರಶಃ ಕಾಂಗ್ರೆಸ್ ಆಡಳಿತ ರಾಜ್ಯದಲ್ಲಿ ಕುಸಿದಿದೆ. ಗುಂಪುಗಾರಿಕೆ ಹೆಚ್ಚಾಗಿದೆ.
ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವರು
ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಮನೆಗಳಿಗೆ ಅರ್ಜಿ ಹಾಕಿದವರ ಗೋಳು ಹೇಳತೀರದಾಗಿದೆ. ಬಿಜೆಪಿ ಆಡಳಿತದಲ್ಲಿದ್ದಾಗ ಸಚಿವ ಈಶ್ವರಪ್ಪ ಅವರು ಗೋವಿಂದಾಪುರ ಮತ್ತು ಗೋಪಿಶೆಟ್ಟಿ ಕೊಪ್ಪದಲ್ಲಿ ಸುಮಾರು 4800 ಮನೆಗಳನ್ನು ನಿರ್ಮಿಸಲು ಪ್ರಯತ್ನಿಸಿದ್ದರು. ಕೆಲಸವೂ ನಡೆಯುತ್ತಿತ್ತು. ಆದರೆ ಈಗ ಸಂಪೂರ್ಣವಾಗಿ ನಿಂತಿದೆ. ರಾಜ್ಯ ಸರ್ಕಾರ ಕೂಡಲೇ ಗಮನಹರಿಸಿ ಹಣ ಬಿಡುಗಡೆ ಮಾಡಿ ಬಡವರಿಗೆ ಸೂರು ನೀಡಬೇಕು. ಇಲ್ಲದಿದ್ದರೆ ಅ. 5 ರ ನಂತರ ಜಿಲ್ಲೆಯಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದರು.
Discussion about this post