ಕಲ್ಪ ಮೀಡಿಯಾ ಹೌಸ್ | ಸೊರಬ |
ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿ ಸೊರಬ ಪ್ರಖಂಡದ ವತಿಯಿಂದ ಆಗಸ್ಟ್ 13ರಂದು ಜಾಗೋ ಭಾರತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಯುವ ವಾಗ್ಮಿ ಹಾರಿಕ ಮಂಜುನಾಥ್ ಪಾಲ್ಗೊಂಡು ಉಪನ್ಯಾಸ ನೀಡಲಿದ್ದಾರೆ.
ಅಂದು ಮಧ್ಯಾಹ್ನ 12 ಗಂಟೆಗೆ ನಗರದ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಖಂಡ ಭಾರತದ ಪರಿಕಲ್ಪನೆ ಮತ್ತು ಸಂಕಲ್ಪ, ಯುವ ವಿದ್ಯಾರ್ಥಿಗಳ ಸಮಸ್ಯೆಗಳು, ಸಾಮೂಹಿಕ ಸಾಮರಸ್ಯ ಸಾಧಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತಾಗಿ ಹಾರಿಕ ಮಂಜುನಾಥ್ ಮಾತನಾಡಲಿದ್ದಾರೆ.
ಇನ್ನು, ಅದೇ ದಿನ ಸಂಜೆ 7 ಗಂಟೆಗೆ ಶ್ರೀ ಆಂಜನೇಯ ಸ್ವಾಮಿ ದೇವಾಲಯದಿಂದ ಶ್ರೀ ರಂಗನಾಥ ಸ್ವಾಮಿ ದೇವಾಲಯದವರೆಗೂ ಪಂಜಿನ ಮೆರವಣಿಗೆಯನ್ನೂ ಸಹ ಆಯೋಜಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post