No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೀಘ್ರದಲ್ಲಿಯೇ ಫಲಾನುಭವಿಗಳಿಗೆ ಮನೆ ವಿತರಿಸಿ: ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

ರಾಷ್ಟ್ರಬಳಗದ ವತಿಯಿಂದ ಜು.18ರಂದು ಬೃಹತ್ ಜನಾಗ್ರಹ ಜಾಥಾ

kalpa News by kalpa News
July 17, 2024
in ಶಿವಮೊಗ್ಗ
0
ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಬಡವರಿಗಾಗಿ ನಿರ್ಮಿಸಿರುವ ಮನೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಬೇಕು ಎಂದು ಆಗ್ರಹಿಸಿ ಜು.18ರಂದು ಬೆಳಿಗ್ಗೆ 10ಕ್ಕೆ ರಾಮಣ್ಣಶೆಟ್ಟಿ ಪಾರ್ಕ್‍ನಿಂದ ಬೃಹತ್ ಜನಾಗ್ರಹ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ #K S Eshwarappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಮಗೆ ಸೂರು ಸಿಗುತ್ತದೆ ಎಂದುಕೊಂಡು ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಮನೆಗಳಿಗಾಗಿ ಸಾರ್ವಜನಿಕರು ಮುಗಂಡ ಹಣ ನೀಡಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಆದರೆ ಇದುವರೆಗೂ ಮನೆಗಳ ನಿರ್ಮಾಣ ಮತ್ತು ವಿತರಣೆ ಸರಿಯಾಗಿ ಆಗಿಲ್ಲ. ವಿಳಂಬವಾಗುತ್ತಿದೆ. ಸರ್ಕಾರದ ಗಮನಸೆಳೆಯಲು ಈ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
3000 ಮನೆಗಳಲ್ಲಿ ಕೇವಲ 288 ಮನೆಗಳನ್ನು ಮಾತ್ರ ನೀಡಲಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳ ಅಂತ್ಯಕ್ಕೆ ಉಳಿದೆಲ್ಲ ಮನೆಗಳನ್ನು ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಕೊಟ್ಟ ಮಾತಿಗೆ ನಡೆದುಕೊಂಡಿಲ್ಲ. ಈ ಬಗ್ಗೆ ವಸತಿ ಸಚಿವರನ್ನು ಕೂಡ ಭೇಟಿ ಮಾಡಿದ್ದೆವು. ಅವರು ನಮ್ಮ ಮನವಿಗೆ ಸ್ಪಂದಿಸಿದ್ದರು. ಆದರೆ ಇನ್ನೂ ಮನೆ ವಿತರಣೆಗೆ ಕ್ರಮ ಕೈಗೊಂಡಿಲ್ಲ ಎಂದರು.

ಸುಮಾರು 7.77 ಲಕ್ಷ ರೂ.ಗಳಿಗೆ ಮನೆ ಸಿಕ್ಕಂತಾಗುತ್ತದೆ. ಇದಕ್ಕೆ ಸುಮಾರು 3.80ಯಷ್ಟು ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಸಬ್ಸಿಡಿ ಸಿಗುತ್ತದೆ. ಸಾಲಕೂಡ ಬ್ಯಾಂಕಿನಿಂದ ನೀಡಲಾಗುತ್ತದೆ. ಈಗಾಗಲೇ ಮನೆಗಾಗಿ ಫಲಾನುಭವಿಗಳು ಪರಿಶಿಷ್ಟರು 50 ಸಾವಿರ, ಇತರೆಯವರು 80 ಸಾವಿರ ಹಣವನ್ನು ಸಾಲಸೋಲ ಮಾಡಿ ಕಟ್ಟಿದ್ದಾರೆ. ಬಡ್ಡಿ ಕಟ್ಟಲಾಗದೆ, ಸಂಕಷ್ಟದಲ್ಲಿದ್ದಾರೆ. ಇತ್ತ ಮನೆಯೂ ಇಲ್ಲದೆ, ಬಡ್ಡಿ ಕಟ್ಟುವುದು ತಪ್ಪದೆ ಸೂರಿಗಾಗಿ ನಿಟ್ಟುಸಿರು ಬಿಡುತ್ತಿದ್ದಾರೆ. ವಸತಿ ಸಚಿವರು ತಕ್ಷಣವೇ ಇದನ್ನು ಗಮನಿಸಬೇಕು ಎಂದರು.
ರಾಮಣ್ಣಶೆಟ್ಟಿ ಪಾರ್ಕ್‍ನಿಂದ ಬೆಳಿಗ್ಗೆ 10ಕ್ಕೆ ಗಾಂಧಿಬಜಾರ್ ನೆಹರು ರಸ್ತೆಯ ಮೂಲಕ ಜಾಥಾ ಹೊರಟು, ಸೀನಪ್ಪ ಶೆಟ್ಟಿ ವೃತ್ತ(ಗೋಪಿ ವೃತ್ತ)ದಲ್ಲಿ ಸಭೆ ನಡೆಸಲಾಗುವುದು. ಅಲ್ಲಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಈ ಜಾಥಾಕ್ಕೆ ಫಲಾನುಭವಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಮಳೆ ಬರುವ ನಿರೀಕ್ಷೆ ಇರುವುದರಿಂದ ಜೊತೆಗೆ ಕೊಡೆಯನ್ನು ತರಬೇಕು ಎಂದು ಮನವಿ ಮಾಡಿದರು.

Also read: ವ್ಯಾಪಕ ಮಳೆ: ಜುಲೈ 18ರಂದು ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಇದಲ್ಲದೆ ಜನಪ್ರತಿನಿಧಿಗಳಿಲ್ಲದೆ ಅಭಿವೃದ್ಧಿ ಕುಂಠಿತವಾಗಿದೆ. ಶಿವಮೊಗ್ಗ ಮಹಾನಗರಪಾಲಿಕೆಗೆ ತಕ್ಷಣವೇ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕು. ವಾರ್ಡ್‍ಗಳ ಹೆಚ್ಚಳ ಇತ್ಯಾದಿಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಈಗಿರುವ ಸ್ಥಿತಿಯಲ್ಲಿಯೇ ಚುನಾವಣೆ ನಡೆಸಬೇಕು ಎಂದರು.

ಕಾಂಗ್ರೆಸ್ ಸರ್ಕಾರ ಪರಿಶಿಷ್ಟರನ್ನು ಕಡೆಗಾಣಿಸುತ್ತಿದೆ. ಸಿದ್ದರಾಮಯ್ಯ ನವರು ಅಹಿಂದ ನಾಯಕರಾಗಿ ಉಳಿದಿಲ್ಲ. ವಾಲ್ಮೀಕಿ ನಿಗಮದಲ್ಲಿ ಆದ ಭ್ರಷ್ಟಚಾರವೇ ಇದಕ್ಕೆ ಉದಾಹರಣೆಯಾಗಿದೆ. ಕಾಂಗ್ರೆಸ್ ಎಂದರೆ ಲೂಟಿಕೋರರ ಒಂದು ಗುಂಪು ಎಂದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಈ.ವಿಶ್ವಾಸ್, ಎಂ. ಶಂಕರ್, ಸುವರ್ಣ ಶಂಕರ್, ಶಂಕರ್, ಬಾಲು, ಗನ್ನಿ ಶಂಕರ್, ಕಾಚಿನಕಟ್ಟೆ ಸತ್ಯನಾರಾಯಣ, ಮಹಾಲಿಂಗಶಾಸ್ತ್ರಿ, ಮೋಹನ್, ನಾಗರಾಜ್, ವಾಗೀಶ್, ಶ್ರೀಕಾಂತ್, ಜಾಧವ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವ್ಯಾಪಕ ಮಳೆ: ಜುಲೈ 18ರಂದು ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

Next Post

ಶಿಕಾರಿಪುರ | ಮೈದುಂಬಿಕೊಂಡ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ

kalpa News

kalpa News

Next Post
ಶಿಕಾರಿಪುರ | ಮೈದುಂಬಿಕೊಂಡ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ

ಶಿಕಾರಿಪುರ | ಮೈದುಂಬಿಕೊಂಡ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL