ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟದಿಂದಾಗಿ ಸಾಕಷ್ಟು ಮನೆಗಳ ಕುಸಿತ, ಆಸ್ತಿ- ಪಾಸ್ತಿ, ಬೆಳೆ ಹಾನಿ ಸಂಭವಿಸಿದ್ದು, ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ, ತಕ್ಷಣವೇ ಸರ್ಕಾರ ತಜ್ಞರು ಹಾಗೂ ಅಧಿಕಾರಿಗಳನ್ನೊಳಗೊಡ ಟಾಸ್ಕ್ ಪೋರ್ಸ್ ರಚನೆ ಮಾಡಿ, ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಶಾಸಕ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಸರ್ಕಾರವನ್ನು ಒತ್ತಾಯಿಸಿದರು.
ಮಂಗಳವಾರ ವಿಧಾನ ಪರಿಷತ್ ಅಧಿವೇಶನದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸಾಕಷ್ಟು ಮನೆ, ಆಸ್ತಿ, ಪಾಸ್ತಿ, ಬೆಳೆ ಹಾನಿ ಸಂಭವಿಸಿದ್ದು, ಪ್ರಸ್ತುತ ಅಕ್ಷರಶ ಮಳೆನಾಡಾಗಿದೆ, ಪ್ರವಾಹ ಭೀತಿಯಲ್ಲಿ ಬದುಕುವಂತಾಗಿದೆ ಎಂದು ಅತಿವೃಷ್ಟಿಯಲ್ಲಿ ಅನಾಹುತಗಳನ್ನು ಸದನದಲ್ಲಿ ಪ್ರಸ್ತಾಪಿಸಿದರು.

Also read: ಆನವಟ್ಟಿಯಲ್ಲಿ ಶಾಲಾ ಗೋಡೆ ಕುಸಿತ | ವಿದ್ಯಾರ್ಥಿಗಳು ಬಚಾವ್
ಕಳೆದೊಂದು ತಿಂಗಳಿಂದ ಅತಿವೃಷ್ಟಿಯಿಂದ ಹಾನಿ ಸಂಭವಿಸಿದ್ದರೂ ಪ್ರವಾಹದ ನಿರ್ವಹಣೆ ಮಾತ್ರ ನಿರೀಕ್ಷೆಗೆ ತಕ್ಕಂತೆ ಆಗಿಲ್ಲ, ಇದು ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ, ಸರ್ಕಾರದ ಸಚಿವರ ಕಾಟಾಚಾರಕ್ಕೆ ಅಲ್ಲೊಂದು ಇಲ್ಲೊಂದು ಭೇಟಿ ನೀಡಿದ್ದು ಬಿಟ್ಟರೆ ಯಾವುದೇ ರಚನಾತ್ಮಕ ಪರಿಹಾರ ಕಾರ್ಯಗಳನ್ನುಕೈಗೊಳ್ಳುವಲ್ಲಿ ವಿಫಲವಾಗಿದೆ, ಸರ್ಕಾರ ಕೂಡಲೇ ಉನ್ನತ ಅಧಿಕಾರಿಗಳ ಹಾಗೂ ತಜ್ಞರ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಬೇಕು ಮತ್ತು ತುರ್ತಾಗಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ವಿಶೇಷ ಪರಿಹಾರ ಪ್ಯಾಕಜೇಜ್ ಬಿಡುಗಡೆ ಮಾಡಬೇಕು ಎಂದು ಶಾಸಕ ಡಾ.ಧನಂಜಯ ಸರ್ಜಿ ಸರ್ಕಾರವನ್ನು ಆಗ್ರಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post