ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದ ಕೂಲಿ ಕಾರ್ಮಿಕರು, ನಿರ್ಗತಿಕರು, ಬಡವರ್ಗದವರು ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷ ಪ್ರಸನ್ನನಾಥ ಸ್ವಾಮೀಜಿ ಅವರ ಅಶೀರ್ವಾದ ಹಾಗೂ ಸಹಕಾರದೊಂದಿಗೆ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ನಗರದ ಮಲ್ಲಿಗೇನಗಳ್ಳಿಯಲ್ಲಿ ಗುಡಿಸಲುಗಳಲ್ಲಿ ವಾಸವಾಗಿರುವ ನೂರಾರು ಬಡ ಕುಟುಂಬಗಳಿಗೆ ಊಟ, ನೀರು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀಕಾಂತ್, ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ, ಕಾಂಗ್ರೆಸ್ ಮುಖಂಡ ರಂಗೇಗೌಡ, ಜಿಪಂ ಮಾಜಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್(ದನಿ), ವಿಜಯ್ ಕುಮಾರ್(ದನಿ), ಮಾಜಿ ಮಹಾಪೌರೆ ಸುವರ್ಣಾ ಶಂಕರ್, ಮಲೆನಾಡು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಎನ್. ರಾಮಕೃಷ್ಣ, ಒಕ್ಕಲಿಗ ಸಮಾಜದ ಮಹಿಳಾ ಮುಖಂಡರಾದ ಭಾರತಿ ರಾಮಕೃಷ್ಣ, ಶಾರದಮ್ಮ, ನೇತ್ರಾವತಿ, ವಕೀಲ ಶ್ರೀಪಾದ್ ಮತ್ತು ಜಿ. ರಾಘವೇಂದ್ರ, ಮೆಸ್ಕಾಂ ನಿರ್ದೇಶಕ ದಿನೇಶ್, ರಾಜ್ಯ ಕಾಂಗ್ರೆಸ್ ಯುವ ಮುಖಂಡ ಚೇತನ್ ಗೌಡ, ಪ್ರಧಾನ ಕಾರ್ಯದರ್ಶಿ ರಘುಗೌಡ, ಎಸ್.ಕೆ. ರಾಘವೇಂದ್ರ, ಗುರು, ಮಧು, ಪ್ರಮೋದ್, ಧನಂಜಯ್, ಸುನಿಲ್ ಕುಮಾರ್, ಮಂಜುನಾಥ್, ನಾಗರಾಜ್ ಸೇರಿದಂತೆ ಹಲವಾರು ಒಕ್ಕಲಿಗ ಯುವ ಮುಖಂಡರುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post