No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ಪ್ರತಿಭಟನೆ

kalpa News by kalpa News
August 7, 2023
in ಶಿವಮೊಗ್ಗ
0
ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ಪ್ರತಿಭಟನೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ರಾಜ್ಯ ಸರ್ಕಾರದ ರೈತವಿರೋಧಿ ಧೋರಣೆ ಖಂಡಿಸಿ ಇಂದು ಜಿಲ್ಲಾ ಬಿಜೆಪಿ ರೈತಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ರೈತದ್ವೇಷಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರಸರ್ಕಾರ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ನೀಡುತ್ತಿದ್ದ 6ಸಾವಿರಕ್ಕೆ ರಾಜ್ಯ ಬಿಜೆಪಿ ಸರ್ಕಾರ ಹಿಂದೆ ನಾಲ್ಕು ಸಾವಿರರೂ. ನೀಡುತ್ತಿತ್ತು. ಅದನ್ನು ನೀಡದೆ ರೈತರಿಗೆ ಚೌರ ಮಾಡಿದ್ದಾರೆ. ತಕ್ಷಣ ಹಣ ವಾಪಾಸ್ ನೀಡಬೇಕು. ಮೂರು ತಿಂಗಳಲ್ಲಿ 42 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ರೈತರ ಕುಟುಂಬ ಭೇಟಿ ಮಾಡಿ ಸಾಂತ್ವನ ಹೇಳಿಲ್ಲ. ಪರಿಹಾರ ನೀಡಿಲ್ಲ. ರೈತರ ಮಕ್ಕಳಿಗೆ ಬಿಜೆಪಿ ಸರ್ಕಾರ ಜಾರಿಗೆ ತಂದ ರೈತವಿದ್ಯಾನಿಧಿ ಯೋಜನೆ ಕೂಡ ರದ್ದುಗೊಳಿಸಿದ್ದಾರೆ. ಗೋವು ನಮ್ಮ ತಾಯಿ ಸಮಾನ. ಗೋ ಸಂತತಿ ಉಳಿಸಲು ಜಿಲ್ಲೆಗೊಂದು ಗೋಶಾಲೆಯನ್ನು ಬಿಜೆಪಿ ನೀಡಿತ್ತು. ಅದನ್ನು ರದ್ದುಮಾಡಿದ್ದಾರೆ. ಕೂಡಲೇ ಪುನರಾರಂಭ ಮಾಡಬೇಕು ಎಂದರು.
ಉಚಿತ ವಿದ್ಯುತ್ ಎಂದು ಹೇಳಿ ಮೂರು ಪಟ್ಟು ದರ ಏರಿಸಿದ್ದಾರೆ. ಈ ಅವೈಜ್ಞಾನಿಕ ದರವನ್ನು ಕಡಿಮೆ ಮಾಡಬೇಕು. ಇದು ಸಾಧ್ಯವಾಗದಿದ್ದಲ್ಲಿ ರಾಜೀನಾಮೆ ನೀಡಿ ತೊಲಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ರೈತರಿಗಾಗಿ ಮೀಸಲಿಟ್ಟ 10ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಾಗಿ ವರ್ಗಾವಣೆ ಮಾಡಿದ್ದಾರೆ ಕೃಷ್ಣಾ ಯೋಜನೆಗೆ ಪ್ರತಿವರ್ಷ 10ಸಾವಿರ ರೂ. ನೀಡುತ್ತೇವೆ ಎಂದು ಹೇಳಿದ ಮುಖ್ಯಮಂತ್ರಿಗಳು ಒಟ್ಟಾರೆ ನೀರಾವರಿ ಯೋಜನೆಗೆ ಅಷ್ಟು ಹಣ ನೀಡಿಲ್ಲ ಎಂದರು.
ಎಪಿಎಂಸಿ ಕಾಯಿದೆ ತೆಗೆದು ರೈತನಿಗೆ ತಾನು ಬೆಳೆದ ಬೆಳೆಗೆ ತಾನೇ ಮಾರುವ ಹಕ್ಕನ್ನು ಕಸಿದುಕೊಂಡಿದ್ದಾರೆ. ರೈತರ ಯಂತ್ರೋಪಕರಣ ಸಹಾಯಧನವನ್ನು ನಿಲ್ಲಿಸಿದ್ದಾರೆ. ಸಾವಿರಾರು ಎಕರೆ ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ ಬಂದರು ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದರೂ ತೀರ್ಥಹಳ್ಳಿಯ ಅಡಿಕೆ ಸಂಶೋಧನಾ ಕೇಂದ್ರಕ್ಕೆ ಬಿಜೆಪಿ ಸರ್ಕಾರ ನೀಡಿದ 10ಕೋಟಿ ರೂ.ಗಳನ್ನು ತಡೆಹಿಡಿದಿದ್ದಾರೆ. ಉಚಿತ ಬಸ್ ಗ್ಯಾರಂಟಿ ನೀಡಿದ ಸರ್ಕಾರ ನಿಗಮಕ್ಕೆ 750 ಕೋಟಿಯಲ್ಲಿ ಕೇವಲ 120 ಕೋಟಿ ರೂ. ನೀಡಿದೆ. ವಿವಿಧ ಎಸ್ಕಾಂಗಳಿಂದ ಕೆಪಿಸಿಸಿಗೆ ಸಾವಿರಾರು ಕೋಟಿ ಬಾಕಿ ಇದೆ ಎಂದರು.
ಕಲ್ಲಿದ್ದಲು ನಿಗಮಕ್ಕೆ ಒಂದು ಸಾವಿರ ಕೋಟಿ ಬಾಕಿ ಇದ್ದು, ಅವರು ಸರಬರಾಜು ನಿಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿದ್ಯುತ್ ಅಭಾವ ಕಾಡಲಿದೆ. ಅಧಿಕಾರದ ಆಸೆಗಾಗಿ ಆರ್ಥಿಕ ವ್ಯವಸ್ಥೆಯನ್ನೇ ಬಲಿಕೊಟ್ಟಿದ್ದಾರೆ ಎಂದರು.
ನಾಲಿಗೆ ಭ್ರಷ್ಟ ಸರ್ಕಾರ ಇದಾಗಿದ್ದು, ಎರಡು ತಿಂಗಳಿಂದ ಅನೇಕ ಇಲಾಖೆಯ ಸರ್ಕಾರಿ ನೌಕರರಿಗೆ ಸಂಭಳ ಇಲ್ಲ. ಡಯಾಲಿಸಿಸ್ ಸೆಂಟರ್‍ಗಳನ್ನು ಮುಚ್ಚಲಾಗುತ್ತಿದೆ.  108 ಅಂಬ್ಯುಲೆನ್ಸ್ ನಿಲ್ಲುವ ಹಂತಕ್ಕೆ ತಲುಪಿದೆ. ಟ್ರಾನ್ಸ್‍ಫರ್ ಏಜೆಂಟರುಗಳ ದಂಡೇ ಸರ್ಕಾರದ ಸುತ್ತಲಿದ್ದು, ಹಸಿದ ಹೆಬ್ಬುಲಿಗಳಂತಾಗಿದ್ದಾರೆ. ಜನರನ್ನೇ ತಿಂದುಬಿಡುವ ಹಂತಕ್ಕೆ ಸರ್ಕಾರ ತಲುಪದ್ದು, ಜನರಿಗೆ ಎಲ್ಲವೂ ತಿಳಿಯುತ್ತಿದೆ.ಸರ್ಕಾರ ಇಳಿಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.

Also read: ಉತ್ತಮ ಆರೋಗ್ಯಕ್ಕೆ ಲಸಿಕೆಗಳು ಅತಿ ಅವಶ್ಯಕ: ಶಾಸಕ ಚನ್ನಬಸಪ್ಪ

ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ನಂದಿನಿ ದರ ಏಕಾಏಕಿ ಹೆಚ್ಚಳ ಮಾಡಿದ್ದು, ಆ ದರವನ್ನು ಉತ್ಪಾದಕರಿಗೆ ತಕ್ಷಣ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಅವರಿಗೂ ನೀಡಿಲ್ಲ. ಗ್ರಾಹಕರಿಗೂ ಮೋಸ ಮಾಡಿದೆ. ಸ್ವಾತಂತ್ರ್ಯ ಹೋರಾಟಗಾರರ ಪಠ್ಯವನ್ನು ಕಿತ್ತುಬಿಸಾಕುತ್ತೇವೆ ಎಂದು ಹೇಳಿದ ಮಂತ್ರಿ ಕೂಡ ಈ ಬಗ್ಗೆ ಸುಮ್ಮನಿದ್ದಾರೆ ಎಂದರು.

ಶ್ರಮಶಕ್ತಿ ಯೋಜನೆ ಜೀವನ್ ಜ್ಯೋತಿ ವಿಮಾ ಯೋಜನೆ, ರೈತ ಉತ್ಪಾದಕ ಸಂಸ್ಥೆ ರೈತ ಸಂಪದ ಯೋಜನೆ, ಸಹಸ್ರ ಸರೋವರ ಮತ್ತುಸಹ್ಯಾದ್ರಿ ಸಿರಿ ಯೋಜನೆ, ಮೀನುಗಾರರಿಗೆ ವಸತಿ ಸೌಲಭ್ಯ, ಕಲ್ಯಾಣ ಕರ್ನಾಟಕದಲ್ಲಿ ಕೃಷಿ ಕ್ಲಸ್ಟರ್ ನಿರ್ಮಿಸುವ ಯೋಜನೆ, ಕನಿಷ್ಠ ಬೆಂಬಲ ಬೆಲೆ ನೀಡುವ ಬಿಜೆಪಿ ಸರ್ಕಾರದ ರೈತಪರ ಯೋಜನೆಗಳನ್ನು ಈ ಸರ್ಕಾರ ಕೈಬಿಟ್ಟಿದ್ದು,ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ. ರೈತವಿರೋಧಿ ನೀತಿಗಳನ್ನು ಇನ್ನುಮುಂದಾದರೂ ಸರಿಪಡಿಸಿಕೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳುವ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿಯ ರೈತಮೋರ್ಚಾದ ಜಿಲ್ಲಾಧ್ಯಕ್ಷ ಸಾಲೆಕೊಪ್ಪ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಕೃಷ್ಣೋಜಿರಾವ್, ವಿನ್ಸೆಂಟ್ ರೋಡ್ರಿಗಸ್, ಜಿಲ್ಲಾ ಪ್ರಭಾರಿ ಬಿ.ಇ. ವಿರೂಪಾಕ್ಷಪ್ಪ, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಶಾಸಕ ಡಿ.ಎಸ್ ಅರುಣ್, ಪ್ರಮುಖರಾದ ಶಿವರಾಜ್, ಎಸ್. ಎಸ್. ಜ್ಯೋತಿಪ್ರಕಾಶ್, ವೀರಭದ್ರಪ್ಪ ಪೂಜಾರಿ, ದಿನೇಶ್ ಬುಳ್ಳಾಪುರ, ತಮ್ಮಡಿಹಳ್ಳಿ ನಾಗರಾಜ್ ಸೇರಿದಂತೆ ಹಲವರಿದ್ದರು.
http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತಮ ಆರೋಗ್ಯಕ್ಕೆ ಲಸಿಕೆಗಳು ಅತಿ ಅವಶ್ಯಕ: ಶಾಸಕ ಚನ್ನಬಸಪ್ಪ

Next Post

ಆ.9ರಂದು ಕ್ರಾಂತಿಕಾರಿ ಹಾಡುಗಾರ, ಪ್ರಜಾ ಗಾಯಕ ಗದ್ದರ್ ಅವರಿಗೆ ನುಡಿನಮನ

kalpa News

kalpa News

Next Post
ಆ.9ರಂದು ಕ್ರಾಂತಿಕಾರಿ ಹಾಡುಗಾರ, ಪ್ರಜಾ ಗಾಯಕ ಗದ್ದರ್ ಅವರಿಗೆ ನುಡಿನಮನ

ಆ.9ರಂದು ಕ್ರಾಂತಿಕಾರಿ ಹಾಡುಗಾರ, ಪ್ರಜಾ ಗಾಯಕ ಗದ್ದರ್ ಅವರಿಗೆ ನುಡಿನಮನ

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL