ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುಣಾವಣೆಗೂ ಮುನ್ನ ಜಿಲ್ಲೆಯ ಮೂವರು ಕಾಂಗ್ರೆಸ್ ಮುಖಂಡರನ್ನು ವಿವಿಧ ನಿಗಮ ಮಂಡಳಿಗೆ ನೇಮಕ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ 44 ಜನರನ್ನು ನಿಯೋಜನೆ ಮಾಡಿದ್ದು, ಇದರಲ್ಲಿ ಜಿಲ್ಲೆಯ ಮೂವರಿಗೂ ಸ್ಥಾನ ದೊರೆತಿದೆ.
ಯಾರು ಯಾವುದಕ್ಕೆ ನೇಮಕ?
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ H S Sundresh ಅವರನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ SUDA ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ.

Also read: ಸಚಿವರಾಗಿದ್ದೂ, ಸ್ವಂತ ಕ್ಷೇತ್ರದಲ್ಲೇ ಪ್ರಿಯಾಂಕ್ ಖರ್ಗೆಗೆ ಭಯ: ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ
ಇದರೊಂದಿಗೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ R M Manjunath Gowda ಅವರನ್ನು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಭದ್ರ ಕಾಡಾಗೆ ಚಿಕ್ಕಮಗಳೂರಿನ ಡಾ. ಅಂಶುಮಂತ್ ಅವರನ್ನು ನೇಮಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post