ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸಮಿತಿ ಸದಸ್ಯರ ಸಭೆ ನಡೆಸಿ, ಮುಂಬರುವ ಡಿಸೆಂಬರ್ ತಿಂಗಳಲ್ಲಿ ಜಿಲ್ಲಾ ಮಟ್ಟದ ದೇಹದಾಢ್ಯ ಸ್ಪರ್ಧೆಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು.
ಅದೇ ರೀತಿ ಪ್ರತಿ ವರ್ಷದಂತೆ ದಸರಾ ಕ್ರೀಡಾಕೂಟದ ಅಂಗವಾಗಿ ನಡೆಸಲಾಗುವ ರಾಜ್ಯಮಟ್ಟದ ದೇಹದಾಢ್ಯ ಸ್ಪರ್ಧೆಗಳನ್ನು ನಡೆಸಿಕೊಡಲು ಸಭೆ ಸರ್ವಾನುಮತದಿಂದ ನಿರ್ಧರಿಸಲಾಯಿತು.
Also read: ಸ್ಪರ್ಧೆಗೆ ಅನರ್ಹ ತೀರ್ಪು ಪ್ರಶ್ನಿಸಿ ವಿನೇಶ್ ಪೋಗಟ್ ಸಿಎಎಸ್ ಕೋರ್ಟ್ ಮೊರೆ
ವಾರ್ಷಿಕ ಲೆಕ್ಕಪತ್ರಗಳನ್ನು ಪರಿಶೀಲಿಸಿ, 2023-24ನೇ ಸಾಲಿನ ಸಂಘ ನವೀಕರಣಗೊಳಿಸುವ ಬಗ್ಗೆ ಸಹ ಸಭೆ ತೀರ್ಮಾನ ತೆಗೆದುಕೊಂಡಿತು. ಸಂಘದ ಅಧ್ಯಕ್ಷ ಶ್ರೀ ರವಿ ಗೌಡ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಬಿ. ಯೋಗೇಶ್ ವಾರ್ಷಿಕ ವರದಿ ಸಲ್ಲಿಸಿದರು.
ಸಭೆಯಲ್ಲಿ ಗೌರವಾಧ್ಯಕ್ಷ ಹಾಗೂ ನಿವೃತ್ತ ಪ್ರಾಚಾರ್ಯರಾದ ಭದ್ರಾವತಿಯ ಶಿವಬಸಪ್ಪ ಸೇರಿದಂತೆ ಸಂಘದ ಎಲ್ಲಾ ಜಿಲ್ಲಾ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಹಾಜರಿದ್ದರು. ಉಪಾಧ್ಯಕ್ಷ ಆರ್. ಶರವಣ ಸ್ವಾಗತಿಸಿದರು. ನಿರ್ದೇಶಕ ಭಾನುಪ್ರಕಾಶ್ ವಂದನಾರ್ಪಣೆ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post