ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಹಾಗೂ ಪ್ರಶಾಂತಿ ಸೇವಾ ಟ್ರಸ್ಟ್, ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಭದ್ರಾವತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 13ರಂದು ಬೆಳಿಗ್ಗೆ 10ರಿಂದ ಭದ್ರಾವತಿಯ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ರಾಜ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ. ನಾರಾಯಣಗೌಡ ಅವರು ಉದ್ಘಾಟಿಸುವರು. ಗೃಹ ಸಚಿವ ಆರಗಜ್ಞಾನೇಂದ್ರ, ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಡಿ.ನಾಗೇಶ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು. ಶಾಸಕ ಬಿ.ಕೆ.ಸಂಗಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ನಿಗಮ-ಮಂಡಳಿಗಳ ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ಮುಂತಾದವರು ಅತಿಥಿಗಳಾಗಿ ಆಗಮಿಸಲಿರುವರು.
Also read: ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post