No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾಳೆಯಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆ ನಂತರ ಜಿಲ್ಲೆ ಲಾಕ್ ಡೌನ್: ಪೊಲೀಸರಿಗೆ ಫುಲ್ ಫವರ್

ಲಾಕ್ ಡೌನ್ ವೇಳೆಯಲ್ಲಿ ಅನಾವಶ್ಯಕವಾಗಿ ಗುಂಪು ಸೇರಿದಂತೆ ಕಠಿಣ ಕ್ರಮ, ಮದುವೆಗೆ ಅವಕಾಶವಿಲ್ಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 16, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಹತ್ವದ ಬೆಳವಣಿಗೆಯೊಂದರಲ್ಲಿ ನಾಳೆಯಿಂದ ಜಿಲ್ಲೆಯಾದ್ಯಂತ ಪ್ರತಿದಿನ ಮಧ್ಯಾಹ್ನ 2 ಗಂಟೆ ನಂತರ ಲಾಕ್ ಡೌನ್ ಘೋಷಿಸಲಾಗಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆಯಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಮರುದಿನ ಮುಂಜಾನೆ 5 ಗಂಟೆಯವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿ ಇರಲಿದೆ ಎಂದರು.

ಪೆಟ್ರೋಲ್ ಬಂಕ್‍ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು. ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ಒದಗಿಸುವುದು ಮಾಲಿಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಹಬ್ಬ ಹರಿದಿನಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸೂಚಿಸಲಾಗಿದೆ.

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು.

ಇನ್ನು ಮಾಸ್ಕ್‌ ಧರಿಸದೇ ಓಡಾಡಿದರೆ ರೂ. 200 ದಂಡ ವಿಧಿಸುವ ಜೊತೆಯಲ್ಲಿ ಪೊಲೀಸರು ಅಗತ್ಯ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದರು.

ಸಮಾಲೋಚನಾ ಸಭೆ
ಇದಕ್ಕೂ ಮೊದಲು ನಡೆದ ಸಮಾಲೋಚನಾ ಸಭೆಯಲ್ಲಿ ಚೇಂಬರ್ ಆಫ್ ಕಾಮರ್ಸ್, ಲಾರಿ ಮಾಲಿಕರ ಸಂಘ, ಅಟೋ ಕಾಂಪ್ಲೆಕ್ಸ್ ಸಂಘ, ಸಗಟು ತರಕಾರಿ ವ್ಯಾಪಾರಿಗಳ ಸಂಘ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘ, ವಿಶ್ವೇಶ್ವರಯ್ಯ ಸಣ್ಣ ಕೈಗಾರಿಕೆಗಳ ಸಂಘ, ಬಸ್ ಮಾಲಿಕರ ಸಂಘ, ಜವಳಿ ವರ್ತಕರ ಸಂಘ, ರಿಕ್ಷಾ ಚಾಲಕರ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕೈಗಾರಿಕೆಗಳಿಗೆ ವಿನಾಯಿತಿ ನೀಡಬೇಕು, ಅಟೋ ಕಾಂಪ್ಲೆಕ್ಸ್‍ನಲ್ಲಿ ಸಂಜೆ 6ರವರೆಗೆ ಚಟುವಟಿಕೆಗಳಿಗೆ ಅವಕಾಶ ನೀಡಬೇಕು, ಸೀಲ್‍ಡೌನ್ ಪ್ರದೇಶದಲ್ಲಿರುವ ಬಡವರಿಗೆ ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ತರಕಾರಿ, ದಿನಸಿ ವಿತರಿಸಬೇಕು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಇತ್ಯಾದಿ ಸಲಹೆಗಳು ಬಂದವು.

ಈ ಭಾಗಷಃ ಲಾಕ್ ಡೌನ್ ಜುಲೈ 16ರ ನಾಳೆಯಿಂದ ಮುಂದಿನ ಆದೇಶದವರೆಗೂ ಜಿಲ್ಲೆಯಾದ್ಯಂತ ಜಾರಿಯಲ್ಲಿರುತ್ತದೆ.

ಪೊಲೀಸರಿಗೆ ಫುಲ್ ಪವರ್!
ಇನ್ನು, ಲಾಕ್ ಡೌನ್ ಅವಧಿಯಲ್ಲಿ ಜಿಲ್ಲೆಯ ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ನೀಡಲಾಗಿದ್ದು, ಇದು ಎಲ್ಲ ತಾಲೂಕುಗಳಿಗೆ ಅನ್ವಯವಾಗುತ್ತದೆ. ಅನಾಶ್ಯವಕವಾಗಿ ಓಡಾಡುವುದು, ಗುಂಪು ಸೇರುವುದು ಮಾಡಿದರೆ ಕಠಿಣ ಕ್ರಮ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ಮೇಯರ್ ಸುವರ್ಣಾ ಶಂಕರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮತ್ತಿತರರು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: Corona PositiveCorona VirusKannada News WebsiteLatest News KannadaLocal NewsLockdownMalnad NewsShimogaShivamoggaShivamogga Newsಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share197Tweet123Send
Previous Post

ಟಿಪ್ಪು ನಗರ, ಹೊಸಮನೆ ಸೇರಿ ಹಲವು ಕಡೆ ಸೀಲ್ ಡೌನ್: ಇಂದು ಮತ್ತೆ ಪ್ರಕರಣ ಹೆಚ್ಚಾಗುವ ಸಾಧ್ಯತೆ

Next Post

2025ರ ವೇಳೆಗೆ ಕೃಷಿ ಉತ್ಪನ್ನ ಸಂಸ್ಕರಣ ಪ್ರಮಾಣ ಶೇ.25ಕ್ಕೆ ಹೆಚ್ಚಿಸುವ ಗುರಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
2025ರ ವೇಳೆಗೆ ಕೃಷಿ ಉತ್ಪನ್ನ ಸಂಸ್ಕರಣ ಪ್ರಮಾಣ ಶೇ.25ಕ್ಕೆ ಹೆಚ್ಚಿಸುವ ಗುರಿ: ಸಚಿವ ಬಿ.ಸಿ. ಪಾಟೀಲ್

2025ರ ವೇಳೆಗೆ ಕೃಷಿ ಉತ್ಪನ್ನ ಸಂಸ್ಕರಣ ಪ್ರಮಾಣ ಶೇ.25ಕ್ಕೆ ಹೆಚ್ಚಿಸುವ ಗುರಿ: ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
ಸೊರಬ | ಮಾ.30ರಂದು ರಂಗನಾಥಸ್ವಾಮಿ ದೇವರ ನೂತನ ರಥ ಲೋಕಾರ್ಪಣೆ

ಸೊರಬ | ಮಾ.30ರಂದು ರಂಗನಾಥಸ್ವಾಮಿ ದೇವರ ನೂತನ ರಥ ಲೋಕಾರ್ಪಣೆ

March 28, 2026
ಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ | ಆಕರ್ಷಕ ಟ್ರೋಫಿ – ಟೀಶರ್ಟ್ ಬಿಡುಗಡೆ

ಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ | ಆಕರ್ಷಕ ಟ್ರೋಫಿ – ಟೀಶರ್ಟ್ ಬಿಡುಗಡೆ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL