ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಣೇಶ ಹಬ್ಬ #Ganesha Festival ಮತ್ತು ಈದ್ ಮಿಲಾದ್ #Eid-Milad ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಆ.27ರಿಂದ ಸೆ.19ರವರೆಗೂ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ #DC Gurudatta Hegde ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ, ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ.

ನಿಷೇಧಕ್ಕೆ ಕಾರಣವೇನು?
ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಅದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿ¯್ಲÉಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post