ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮನುಷ್ಯ ಜೀವನದಲ್ಲಿ ಸದಾ ಚಿಂತೆಯಲ್ಲೇ ಮುಳುಗಿರುತ್ತಾನೆ. ಅದರಿಂದ ಹೊರಗೆ ಬರಬೇಕಾದರೆ ಅನ್ನದಾಸೋಹದಂತಹ ಸೇವೆಯನ್ನು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಹೇಳಿದ್ದಾರೆ.
ಅವರು ಇಂದು ಮೆಗ್ಗಾನ್ ಬೋಧನಾ ಆಸ್ಪತ್ರೆಯ ಆವರಣದಲ್ಲಿ ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್‍ವತಿಯಿಂದ ರೋಗಿಗಳು ಮತ್ತು ಸಂಬಂಧಿಕರಿಗೆ ವಾರದಲ್ಲಿ ಎರಡು ದಿನ ಅನ್ನದಾನ ಮಾಡುತ್ತಿದ್ದು, ಇಂದು ನವ್ಯಶ್ರೀ ಅನ್ನದಾನ-100ರ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಮೆಗ್ಗಾನ್ ಆವರಣದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ನಿರಂತರವಾಗಿ ನಡೆಯಲು ಮತ್ತು ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಶೌಚಾಲಯ ಹಾಗೂ ಶಾಶ್ವತ ವಿಶ್ರಾಂತಿ ಹಾಲ್ ನಿರ್ಮಾಣಕ್ಕೆ ಎಲ್ಲಾ ಜನಪ್ರತಿನಿಧಿಗಳ ಒತ್ತಡದಿಂದಾಗಿ 5 ಕೋಟಿ ರೂ. ಅನುದಾನ ಸರ್ಕಾರದಿಂದ ಮಂಜೂರಾಗಿದ್ದು, 2 ಕೋಟಿ ರೂ. ಬಿಡುಗಡೆಯಾಗಿದೆ. ನವ್ಯಶ್ರೀ ಸಂಸ್ಥೆ ಹಸಿರು ಮತ್ತು ಹಸಿವು ಎರಡೂ ಸಿದ್ಧಾಂತಗಳೊಂದಿಗೆ ಕಾರ್ಯಾಚರಿಸುತ್ತಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ರೋಟರಿ ಗೌರ್ನರ್ ಕೆ.ಪಿ. ಶೆಟ್ಟಿ, ನವ್ಯಶ್ರೀ ನಾಗೇಶ್, ಶ್ರೀಕಾಂತ್, ಶರಣ್ಯ ಮಂಜುನಾಥ್, ರೋ.ವಿಜಯಕುಮಾರ್, ಆರ್‍ಎಸ್‍ಎಸ್ ಮುಖಂಡ ರಂಗನಾಥ್, ನಾಗರಾಜ್ ಶೆಟ್ಟರ್, ಸಂತೋಷ್ ಎಲಿಗಾರ್, ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್‍ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಸುಮಾರು 350ಕ್ಕೂ ಹೆಚ್ಚು ಜನರಿಗೆ ಅನ್ನದಾನ ವ್ಯವಸ್ಥೆ ಕಲ್ಪಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post