ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೋಕ್ಸೋ ಪ್ರಕರಣ #POCSO Case ಎಂಬುದು ಗೊತ್ತಿದ್ದರೂ ಪೊಲೀಸರಿಗೆ ಮಾಹಿತಿ ನೀಡದೆ, ಬಾಲಕಿಗೆ ಗರ್ಭಪಾತ #Abortion for a girl ಮಾಡಿಸಿದ ಆರೋಪದ ಮೇಲೆ ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಡಿ.ಪ್ರತಿಮಾ ಅವರನ್ನು ಸೇವೆಯಿಂದ ಅಮಾನತು #Doctor suspend ಮಾಡಲಾಗಿದೆ.
ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಗರ್ಭಪಾತಮಾಡಿಸಿದ ಕಾರಣ ಡಾ. ಪ್ರತಿಮಾ ಸೇರಿ 9 ಜನರ ವಿರುದ್ಧ ನವೆಂಬರ್ 6ರಂದು ಪ್ರಕರಣ ದಾಖಲಾಗಿತ್ತು.
ಸಾಗರ ನಗರ ಠಾಣೆ ಪೊಲೀಸರು ಪೊಕ್ಕೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು. ಇನ್‌ಸ್ಪೆಕ್ಟರ್ ನೇತೃತ್ವದ ತನಿಖಾ ತಂಡ ನೀಡಿದ ವರದಿ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಮತ್ತು ಸಾಗರದ ತಾಲ್ಲೂಕು ವೈದ್ಯಾಧಿಕಾರಿ ಜಂಟಿ ಪರಿಶೀಲನಾ ವರದಿ ಸಲ್ಲಿಸಿದ್ದರು.
ವೈದ್ಯೆಯ ವಿರುದ್ಧ ಕರ್ತವ್ಯಲೋಪ, ಕರ್ತವ್ಯ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದ ಗಂಭೀರ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿವೆ.
ಅದನ್ನು ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ವೈದ್ಯೆಯನ್ನು ಅಮಾನತು ಮಾಡಿ ಎಂದು ಮಂಗಳವಾರ ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















