ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೋವಿಡ್ ಹೆಚ್ಚಾಗಿರುವ ಈ ಸಂದರ್ಭದಲ್ಲಿ ರಕ್ತದ ಕೊರತೆ ಇದ್ದು, ಯುವಕರು ಹೆಚ್ಚು ಹೆಚ್ಚು ರಕ್ತದಾನ ಶಿಬಿರಗಳಲ್ಲಿ ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಅನೇಕ ಜೀವಗಳನ್ನು ಉಳಿಸುವ ಮಹಾತ್ಕಾರ್ಯದಲ್ಲ್ಲಿ ಪಾಲ್ಗೊಳ್ಳಬೇಕೆಂದು ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಸಂಚಾಲಕರು ಮತ್ತು ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಶಾಖೆಯ ನಿರ್ದೇಶಕರೂ ಆದ ಕೆ.ಸಿ. ಬಸವರಾಜ್ ಕರೆ ನೀಡಿದರು.
ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್‌ನಿಂದ ರೆಡ್‌ಕ್ರಾಸ್ ಹಾಗೂ ಸಂಜೀವಿನಿ ರಕ್ತನಿಧಿ ಸಹಕಾರದಲ್ಲಿ ನಗರದ ರೆಡ್‌ಕ್ರಾಸ್ ಬ್ಲಡ್‌ಬ್ಯಾಂಕ್‌ನಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತ ಎಂಬುದು ಅಂಗಡಿಯಲ್ಲಿ ಸಿಗುವ ಖರೀದಿ ಮಾಡಬಹುದಾದ ವಸ್ತುವಲ್ಲ. ಅದು ಜೀವ ಉಳಿಸುವಂತಹುದು ಆದ್ದರಿಂದ ರಕ್ತದಾನ ಮಾಡಲು ಅರ್ಹರಾದ ವ್ಯಕ್ತಿಗಳು ಮುಂದೆ ಬಂದು ರಕ್ತದಾನ ಮಾಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಆಕಾಶವಾಣಿಯ ನಿವೃತ್ತ ಅಧಿಕಾರಿ ಹಾಗೂ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಪ್ರಸಾರ ವಿಭಾಗದ ಪ್ರಮುಖ ಸುಧೀಂದ್ರ ಅವರು ಮಾತನಾಡಿ, ಸಂಘ ಸಂಸ್ಥೆಗಳು ಒಟ್ಟಾಗಿ ಕೋವಿಡ್ ದೂರ ಮಾಡಲು ಪ್ರಯತ್ನದ ಭಾಗವಾಗಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಕೆಲಸ ಮಾಡುತ್ತಿದ್ದು, ಈ ದಿನ ರಕ್ತದಾನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ರಕ್ತದಾನಿಗಳ ಪರವಾಗಿ ಪ್ರೌಢಶಾಲಾ ಶಿಕ್ಷಕ ಹಾಗೂ ಸ್ವಯಂಸೇವಕ ಬಸವನ ಗೌಡ ಮಾತನಾಡಿದರು. ಸಂಜೀವಿನ ಬ್ಲಡ್ ಬ್ಯಾಂಕ್‌ನ ದಿನಕರ್, ಮಂಜುನಾಥ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post