ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಇಂದು ಬೆಳಿಗ್ಗೆ ನಗರದ ಸುಪ್ರಸಿದ್ಧ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಎರಡು ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಗುದ್ದಲಿ ಪೂಜೆ ನೆರವೇರಿಸಿದರು.
ತುಂಗಾ ತಟದಲ್ಲಿರುವ ಈ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಸಮೂಹವಿದ್ದು, ಅನೇಕ ವರ್ಷಗಳಿಂದ ಈ ದೇವವಸ್ಥಾನದ ಜೀರ್ಣೋದ್ದಾರಕ್ಕೆ ಭಕ್ತರು ಮನವಿ ಸಲ್ಲಿಸಿದ್ದರು. ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಇಂದು ಅಧಿಕೃತವಾಗಿ ಮನ್ನಣೆ ಸಿಕ್ಕಿದಂತಾಗಿದೆ.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಹಾಗೂ ಭಕ್ತಾದಿಗಳು ಮತ್ತು ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post