ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೊಸಮನೆ ಬಡಾವಣೆಯ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ವತಿಯಿಂದ ಆರಂಭಿಸಲಾಗುತ್ತಿರುವ ನೂತನ ಸಾಮಾನ್ಯ ಸೇವಾ ಕೇಂದ್ರವನ್ನು ಪಾಲಿಕೆ ಸದಸ್ಯ ರೇಖಾ ರಂಗನಾಥ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಡಾ. ವೀರೇಂದ್ರ ಹೆಗ್ಗಡೆ ಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಎಲ್ಲಾ ಬಾಂಧವರು ಉತ್ತಮ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಸರ್ಕಾರದ ಕೊಂಡಿಯಾಗಿ ಸಂಸ್ಥೆಯು ಜನಪರವಾಗಿ ಸೇವೆ ಸಲ್ಲಿಸುತ್ತಿದೆ. ನಮ್ಮ ಬಡಾವಣೆಯ ನಾಗರಿಕರು ಈ ಸೇವಾಕೇಂದ್ರದ ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಗೀತಾ , ತಾಲೂಕು ಯೋಜನಾಧಿಕಾರಿ ರೂಪಾ ಆದರ್ಶ, ವಲಯದ ಮೇಲ್ವಿಚಾರಕರು ಪ್ರಶಾಂತ್ ಹಾಗೂ ಸೇವಾ ಪ್ರತಿನಿಧಿಗ ಗಳು ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post