ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಉಡುಪಿ ಜಿಲ್ಲೆ ಕುಂದಾಫುರ ತಾಲ್ಲೂಕಿನ ಶಿಕ್ಷಕರೊಬ್ಬರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಇತ್ತೀಚೆಗೆ ಮಣಿಪಾಲದಲ್ಲಿ ಪ್ರತಿಭಟಿಸಿದ ಶಾಸಕ ಯಶಪಾಲ್ ಸುವರ್ಣ ಸೇರಿದಂತೆ 11 ಮುಖಂಡರ ಮೇಲೆ ಕೇಸ್ ದಾಖಲಿಸಿರುವುದನ್ನು ವಿಧಾನ ಪರಿಷತ್ತಿನ ಶಾಸಕ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ತೀವ್ರವಾಗಿ ಖಂಡಿಸಿದ್ದಾರೆ.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಹೋರಾಟ ಮಾಡುವ ಹಕ್ಕಿದೆ. ಪ್ರತಿಭಟನೆಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ. ಸರ್ಕಾರ ಬಂದು ಕೇವಲ 16 ತಿಂಗಳುಗಳ ಒಳಗೆ ಸಾಲು ಸಾಲು ಭ್ರಷ್ಟಾಚಾರ ಮಾಡಿ ನಾಡಿನ ಜನತೆಯ ಆಕ್ರೋಶಕ್ಕೆ ಕಾರಣರಾಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರ, ಇದೀಗ ಒಬ್ಬ ಪ್ರಾಮಾಣಿಕ ಶಿಕ್ಷಕನ ಮೇಲೆ ಗದಾಪ್ರಹಾರ ಮಾಡುತ್ತಿದೆ. ಅದನ್ನು ಪ್ರಶ್ನಿಸಿಲು ಹೋದರೆ ಎಫ್.ಐ.ಆರ್ ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದೆ.
Also read: ಕಟ್ಟಡದಿಂದ ಜಿಗಿದ ನಟಿ ಮಲೈಕಾ ಅರೋರಾ ತಂದೆ | ಸ್ಥಳದಲ್ಲೇ ಹಾರಿಹೋಯ್ತು ಪ್ರಾಣಪಕ್ಷಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post