ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು ಆಗಸ್ಟ್ 1 ರಿಂದ 10 ರವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರು/ಕುಟುಂಬ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಉಚಿತವಾಗಿ ಇ-ಕೆವೈಸಿ ಮಾಡಿಸಲು ಸೂಚಿಸಲಾಗಿದೆ.
ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post