ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಕಾಂಗ್ರೆಸ್‌ನಲ್ಲಿ ಭೂಕಂಪದ ಎಲ್ಲ ಮುನ್ಸೂಚನೆ ಕಾಣುತ್ತಿದೆ. ಕಾಂಗ್ರೆಸಿಗರೇ ನಿಜವನ್ನು ಹೊರಗೆ ತರುತ್ತಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ Araga Gnanendra ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿ, ಹಿಂದುಳಿದ ವರ್ಗದ ನಾಯಕರಾಗಿ, ಗಾಂಧಿ ಕುಟುಂಬಕ್ಕೆ ಆಪ್ತರಾಗಿರುವ ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್‌ನ ಒಳಬೇಗುದಿಯನ್ನು ಹೊರಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ CM Siddaramaiah ನಡವಳಿಕೆಯಿಂದ ಪಕ್ಷ ಯಾವ ದಿಕ್ಕಿನಲ್ಲಿ ಹೋಗುತ್ತದೆ ಎಂಬುದನ್ನು ಕಾಂಗ್ರೆಸಿಗರು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಭ್ರಷ್ಟ ಮತ್ತು ಕೆಟ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಲು ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅನಿವಾರ್ಯ ಎಂದು ಹೇಳಿದರು.

Also read: ಜಿ20 ಶೃಂಗಸಭೆ ಮೂಲಕ ಜಗತ್ತಿಗೆ ವರ್ತಮಾನದ ನಾಯಕತ್ವ ಪರಿಚಯ: ಸಿ.ಟಿ ರವಿ
ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ದೇಶದ ಹೆಮ್ಮಯ ದಿನಗಳನ್ನು ಜಗತ್ತಿಗೆ ಎತ್ತಿ ತೋರಿಸುತ್ತಿದ್ದಾರೆ. ಇನ್ನೊಂದು ಕಡೆ ರಾಹುಲ್ ಗಾಂಧಿ ಆಗಾಗ ವಿದೇಶಗಳಿಗೆ ತೆರಳಿ ದೇಶವಿರೋಧಿ ಹೇಳಿಕೆ ಕೊಡುತ್ತಿದ್ದಾರೆ. ಇದರಿಂದ ಪ್ರಜಾಪ್ರಭುತ್ವದ ಮೇಲೆ ಬಹಳ ದೊಡ್ಡ ಪ್ರಹಾರವಾಗುತ್ತಿದೆ. ಅವರಿಗೆ ಹೇಳುವವರು ಕೇಳುವವರು ಇಲ್ಲದಂತಾಗಿದೆ. ರಾಹುಲ್‌ಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದರು.











Discussion about this post