ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕ್ಷಣದಿಂದ ಕಲಿಯುವ ಜ್ಞಾನದ ಜೊತೆಗೆ ಸಮಾಜದಲ್ಲಿ ಅವಶ್ಯಕತೆಯಿರುವ ಕೌಶಲ್ಯತೆಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿಕೊಳ್ಳಿ ಎಂದು ಶಾಂತಲಾ ಸ್ಪೆರೋಕ್ಯಾಸ್ಟ್ ವ್ಯವಸ್ಥಾಪಕ ನಿರ್ದೇಶಕರಾದ ಎ.ಎಲ್. ಚಂದ್ರಶೇಖರ್ ಹೇಳಿದರು.
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಕಾರ್ಪೊರೇಟ್ ಕ್ಷೇತ್ರದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸದಾ ನೀಡಲಾಗುತ್ತಿದೆ. ಅಂತಹ ಅವಕಾಶಗಳನ್ನು ಬಳಸಿಕೊಂಡು ಮಹಿಳೆಯರು ಅನೇಕ ಸಾಧನೆಗಳನ್ನು ನಡೆಸುತ್ತಿರುವುದು ಅಭಿನಂದನಾರ್ಹ. ನಾವು ಮಾಡುವ ಕೆಲಸದ ಬಗ್ಗೆ ನಂಬಿಕೆ ಹಾಗೂ ಶಿಸ್ತು ಕಂಡಿತ ಕಷ್ಟದ ದಿನಗಳಲ್ಲಿ ನಮ್ಮನ್ನು ಕಾಪಾಡಲಿದೆ ಎಂದು ಅಭಿಪ್ರಾಯಪಟ್ಟರು.
Also read: ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ | ವಿವಿಧ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ | ಇಲ್ಲಿದೆ ಡೀಟೇಲ್ಸ್
ಮ್ಯಾನೆಜ್‌ಮೆಂಟ್ ವಿದ್ಯಾರ್ಥಿಗಳು ದೇಶ ಹಾಗೂ ರಾಜ್ಯದಲ್ಲಿನ ಆರ್ಥಿಕ ವ್ಯವಸ್ಥೆ ಖರ್ಚು ಆದಾಯ ಬಜೆಟ್ ಎಲ್ಲದರ ಕುರಿತ ಜ್ಞಾನ ಹೊಂದಿರಬೇಕು. ಸಮಾಜದ ಅಭ್ಯುದಯಕ್ಕೆ ಬೇಕಾದ ಅವಶ್ಯಕ ಯೋಜನೆಗಳ ಕುರಿತು ಸಮೀಕ್ಷೆ ಮಾಡಿ. ಬದುಕು ಪ್ರತಿಯೊಬ್ಬರಿಗೂ ವಿಭಿನ್ನವಾಗಿದ್ದು, ಬದುಕಿನ ದಾರಿಯಲ್ಲಿ ಎದುರಾಗುವ ಸವಾಲುಗಳ ಎದುರಿಸಲು ಇಂದಿನಿಂದಲೇ ಸನ್ನದ್ದರಾಗಿ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮಾತನಾಡಿ, ಎಲ್ಲರನ್ನೂ ಹಿಂದಿಕ್ಕಿ ಹೋದ ವ್ಯಕ್ತಿ ಸ್ಪರ್ಧೆಯಲ್ಲಿ ಗೆಲ್ಲಬಹುದು, ಅದರೇ ಎಲ್ಲರನ್ನೂ ಜೊತೆಯಾಗಿಸಿಕೊಂಡು ಹೋದ ವ್ಯಕ್ತಿ ಜೀವನದಲ್ಲಿ ಗೆಲ್ಲುತ್ತಾನೆ. ಮೌಲ್ಯಗಳು ಬುದುಕಿನ ಆಧಾರ ಸ್ತಂಭಗಳಾಗಿದ್ದು, ಅದರ ಪ್ರಾಮುಖ್ಯತೆ ಅರಿಯಿರಿ.
ಗ್ರಾಮೀಣ ಉದ್ದಿಮೆಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಿ. ಹಳ್ಳಿಗಳಲ್ಲಿ ಅನೇಕ ಗುಡಿ ಮತ್ತು ಗೃಹ ಕೈಗಾರಿಕೆಗಳು ಪ್ರಾರಂಭಗೊಂಡಿದ್ದು, ಮಾರ್ಕೆಟಿಂಗ್ ಮಾಡುವಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅಂತಹ ಸವಾಲುಗಳಿಗೆ ಮ್ಯಾನೆಜ್‌ಮೆಂಟ್ ವಿದ್ಯಾರ್ಥಿಗಳು ಪರಿಹಾರ ನೀಡಲು ಪ್ರಯತ್ನಿಸಿ ಎಂದು ಸಲಹೆ ನೀಡಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿದರು. ನಿರ್ದೇಶಕರಾದ ಹೆಚ್.ಸಿ. ಶಿವಕುಮಾರ್, ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್, ಶೈಕ್ಷಣಿಕ ಡೀನ್ ಡಾ.ಪಿ. ಮಂಜುನಾಥ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕರಾದ ಡಾ.ಶ್ರೀನಿವಾಸಮೂರ್ತಿ ಸ್ವಾಗತಿಸಿ, ವರ್ಷಾ ಮತ್ತು ತಂಡ ಪ್ರಾರ್ಥಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post