ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂಧಿವೆ. ಅಮೃತ ಮಹೋತವವನ್ನು ಆಚರಿಸುತ್ತಿರುವ ನಾವು ಇಂತಹ ವಿಶ್ವವಿದ್ಯಾಲಯ ಮಟ್ಟದ ಕಾರ್ಯಾಗಾರಗಳಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದು ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu University ಕುಲಸಚಿವರಾದ ಜಿ. ಅನುರಾಧ ಅಭಿಪ್ರಾಯಪಟ್ಟರು.
ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ವಿಶ್ವವಿದ್ಯಾಲಯ ನಗರ ಕಛೇರಿಯಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯ ಮಟ್ಟದ ಒಂದು ದಿನದ ಕಾರ್ಯಾಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕುವೆಂಪು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ರಾಮಲಿಂಗಪ್ಪ ಮಾತನಾಡಿ, ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಮೊದಲು ಆರೋಗ್ಯವಾಗಿದ್ದು, ಸಮಾಜದಲ್ಲಿ ಅಥವಾ ಸಮೂದಾಯದಲ್ಲಿ ಸ್ವಾತಂತ್ರ್ಯದ ಪರಿಕಲ್ಪನೆ ಮೂಡಿಸಿ ಎಲ್ಲರಲ್ಲೂ ಸಮಾನತೆ ಸ್ವಾತಂತ್ರ್ಯ ಮೂಡಿಸುವ ಮತ್ತು ಅಳವಡಿಸಿಕೊಳ್ಳುವ ಕುರಿತು ಅರಿವು ಮೂಡಿಸುವಲ್ಲಿ ಸ್ವಯಂ ಸೇವಕರಾದ ನೀವು ಪಾಲ್ಗೊಳ್ಳಬೇಕು ಎಂದು ಪ್ರೇರೇಪಿಸಿದರು. ಇಂತಹಾ ಜನೋಪಯೋಗಿ ಕಾರ್ಯಾಗಾರಗಳನ್ನು ಎನ್.ಎಸ್.ಎಸ್. ಸ್ವಯಂ ಸೇವಕರಿಗೆ ಹಮ್ಮಿಕೊಳ್ಳುತ್ತಿರುವ ವಿಶ್ವವಿದ್ಯಾಲಯದ ಎನ್,.ಎಸ್.ಎಸ್. ವಿಭಾಗದ ಕಾರ್ಯಕ್ರಮ ಸಂಯೋಜನಾಧಿಕಾರಿಗಳ ಕಾರ್ಯಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ. ನಾಗರಾಜ್ ಪರಿಸರ, ಕಾರ್ಯಕ್ರಮ ಸಂಯೋಜನಾಧಿಕಾರಿಗಳು, ಕುವೆಂಪು ವಿಶ್ವವಿದ್ಯಾಲಯ, ಇವರು ಸಾಂಪ್ರದಾಯಿಕ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಸರ್ವರನ್ನೂ ಸ್ವಾಗತಿಸಿ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಆನಂತರ ಮೊದಲನೇ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಕಾಲೇಜು ಇತಿಹಾಸ ವಿಭಾಗ ಸಹಾಯಕ ಪ್ರಾಧ್ಯಾಪಕ ವಿನೋದ್ ಪ್ರಕಾಶ್ ಮಾತನಾಡಿ, ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ @ ೭೫ ಕುರಿತು ತಮ್ಮದೇ ಆದ ಶೈಲಿಯಲ್ಲಿ ಗೋಷ್ಟಿಯನ್ನು ನಡೆಸಿಕೊಟ್ಟರು. ಬೇರೆ ಬೇರೆ ದೇಶಗಳಲ್ಲಿ ಇರುವ ಸ್ವಾತಂತ್ರ್ಯಕ್ಕೆ ಹೋಲಿಸಿದರೆ ನಮ್ಮ ಭಾರತ ದೇಶದಲ್ಲಿ ಸ್ವಾತಂತ್ರ್ಯಕ್ಕೆ ಬಹಳ ಮಹತ್ತರ ಸ್ಥಾನವಿದೆ. ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆಧ್ಯತೆ ನೀಡಿದ ದೇಶವೆಂದರೆ ಅದು ನಮ್ಮ ಹೆಮ್ಮೆಯ ಭಾರತ. ಇಂದು ನಮ್ಮ ದೇಶದ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮಾಡುತ್ತಿರುವ ಸಾಧನೆಗೆ ಇದು ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಮೈಸೂರು ಆಯುರ್ವೇದ ಚಿಕಿತ್ಸಾಲಯ ಆಯುರ್ವೇದ ವೈಧ್ಯರು ಡಾ ಪ್ರಕೃತಿ ಮಂಚಾಲೆ ಮಾತನಾಡಿ, ಆಧುನಿಕ ಜೀವನ ಶೈಲಿಯಲ್ಲಿ ಆಹಾರ ಕ್ರಮಗಳ ಕುರಿತು ಅತ್ಯುತ್ತಮ ಉಪನ್ಯಾಸ ನೀಡುತ್ತಾ, ಜಂಕ್ ಫ಼ುಡ್, ಬೀದಿ ಬದಿಯ ಆಹಾರವನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಆಗಬಹುದಾದ ದುಷ್ಪರಿಣಾಮಗಳನ್ನು ವಿವರಿಸಿದರು.
Also read: ‘ಪ್ರಾಮಿಸ್’ ಚಿತ್ರದ ಪೋಸ್ಟರ್ ಬಿಡುಗಡೆ
ಭಾರತದ ಸಾಂಪ್ರದಾಯಿಕ, ಕಾಲಮಾನಕ್ಕೆ ತಕ್ಕಂತೆ ಪ್ರಕೃತಿದತ್ತವಾಗಿ ಸಿಗುವ ತಾಜಾ ಆಹಾರ ಪದಾರ್ಥಗಳ ಬಳಕೆ, ಮನೆಮದ್ದುಗಳ ಉಪಯೋಗವನ್ನು ತಿಳಿಸಿಕೊಟ್ಟರು. ಔಷಧಿಯೇ ಆಹಾರ ಆಗಬಾರದು. ಆಹಾರವನ್ನೇ ಔಷಧವನ್ನಾಗಿ ಮಾಡಿಕೊಳ್ಳುವುದು ನಮ್ಮ ಕೈಯಲ್ಲಿಯೆ ಇದೆ ಎಂದು ತಿಳಿಸಿದರು.
ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಜೇಸಿ ವಿವೇಕ್ ಅಧ್ಯಕ್ಷರಾದ ವಾಣಿ ಜಗದೀಶ್ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ, ಪೌಷ್ಠಿಕ ಮತ್ತು ಸತ್ವಯುತ ಆಹಾರ ಸೇವನೆಯನ್ನು ರೂಢಿಸಿಕೊಳ್ಳುವುದರ ಮೂಲಕ, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಜೇಸಿ ಜಗದೀಶ್, ಪೂಜಾ ನಾಗರಾಜ್ ಉಪಸ್ಥಿತರಿದ್ದರು.
ಶಿವಮೊಗ್ಗ ನಗರದ ಒಟ್ಟು 160 ಸ್ವಯಂ ಸೇವಕರು ಮತ್ತು ಎನ್.ಎಸ್.ಎಸ್. ಅಧಿಕಾರಿಗಳು ಭಾಗವಹಿಸಿದ್ದರು. ಎಸ್.ವಿ.ಕೆ. ಶಿಕ್ಷಣ ಮಹಾವಿದ್ಯಾಲಯದ ಎನ್.ಎಸ್.ಎಸ್. ಸ್ವಯಂ ಸೇವಕಿಯರು ಪ್ರಾರ್ಥಿಸಿದರು ಮತ್ತು ಎನ್.ಎಸ್.ಎಸ್. ಅಧಿಕಾರಿಗಳಾದ ಡಾ. ಶರಣ ನಾಯಕ ವಂದಿಸಿ, ಕು. ನಿಹಾರಿಕಾ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post