ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್’ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, ನಿನ್ನೆ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಸೂಕ್ತ ದಾಖಲೆಯಿಲ್ಲದೇ ಸಾಗಾಟ ಮಾಡುತ್ತಿದ್ದ ಒಟ್ಟು ರೂ. 30,64,000 ನಗದನ್ನು ವಶಕ್ಕೆ ಪಡೆಯಲಾಗಿದೆ.
ಎಲ್ಲೆಲ್ಲಿ ಎಷ್ಟು ಹಣ?
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೂ. 27,60,000, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೂ. 1,79,000 ಹಾಗೂ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೂ. 1,25,000 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
Also read: ಶಿವಮೊಗ್ಗ: ಜೀವ ಬೆದರಿಕೆ ಹಾಕಿದ ರಿಯಾಬ್ ಬಳಿ ದೊರೆತ ಆಯುಧಗಳು ಎಂತಹುದ್ದು ಗೊತ್ತಾ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post