ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಂಬರುವ ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ನಾಖಾಬಂಧಿ (ಚೆಕ್ ಪೋಸ್ಟ್ ಗಳನ್ನು) ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ನಾನ್ ಸ್ಟಿಕ್ ದೋಸಾ ತವಾ, ಟನ್ಗಟ್ಟಲೆ ಆಹಾರ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಮಾನತ್ತುಪಡಿಸಿಕೊಳ್ಳಲಾದ ದಾಖಲೆಗಳಿಲ್ಲದ ವಸ್ತುಗಳ ವಿವರ ಹೀಗಿದೆ:
- ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 29,70,000/- ರೂ.ಗಳ ಒಟ್ಟು 1100 ಸಂಖ್ಯೆಯ ನಾನ್ ಸ್ಟಿಕ್ ದೋಸಾ ತವಾ ಗಳನ್ನು ವಶಪಡಿಸಿಕೊಳ್ಳಲಾಗಿದೆ.
- ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 8,00,000/- ರೂಗಳ ಒಟ್ಟು 30 ಟನ್ ತೂಕದ ಬೇಳೆ, ರವೆ, ಗೋಧಿ ಮತ್ತು ಇತರೆ ಆಹಾರ ಸಾಮಗ್ರಿಗಳು ತುಂಬಿದ್ದ 1,000/- ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
- ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 7,00,000/- ರೂ ಗಳ ಒಟ್ಟು 10 ಟನ್ 504 ಕೆಜಿ ತೂಕದ ಅಕ್ಕಿ ತುಂಬಿದ್ದ 404 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.
- ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 10,00,000/- ರೂ ಗಳ ಬಟ್ಟೆ, ಸೀರೆ, ಇಡ್ಲಿ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ, ಅಂದಾಜು ಮೌಲ್ಯ 17,507/- ರೂಗಳ ಒಟ್ಟು 25 ಲೀಟರ್ 608 ಮಿಲಿ ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡು ಆರೋಪಿತರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post