ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆನೆ ದಾಳಿಗೆ ಯುವತಿ ಸಾವನ್ನಪ್ಪಿರುವ ಘಟನೆ ಎನ್ ಆರ್ ಪುರ ಸಮೀಪದ ಬನ್ನೂರು ಗ್ರಾಮದ ಬಳಿ ನಡೆದಿದೆ.
ಹೊನ್ನಳ್ಳಿ ಮೂಲದ ಅನಿತಾ (25) ಮೃತ ದುರ್ದೈವಿ. ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಈಕೆ, ಅಲ್ಲಿನ ತೋಟದ ಸಾಲು ಮನೆಗಳಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ಆನೆ ತುಳಿತಕ್ಕೆ ಒಳಗಾದ ಯುವತಿಯನ್ನ ಶಿವಮೊಗ್ಗದ ಮೆಗ್ಗಾನ್ ಗೆ ಕರೆತರುವ ಮೊದಲೇ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾಳೆ. ಆಕೆಯ ಶವವನ್ನ ಶಿವಮೊಗ್ಗದ ಮೆಗ್ಗಾನ್ ಶವಗಾರದಲ್ಲಿ ನಿನ್ನೆ ಇರಿಸಲಾಗಿತ್ತು.
ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರಿಗೆ ಕಾನೂನು ಪ್ರಕಾರ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇತ್ತೀಚೆಗೆ ಆನೆ ದಾಳಿಯಲ್ಲಿ ಈ ಭಾಗದಲ್ಲಿ ಹಲವಾರು ಜನರು ಪ್ರಾಣ ಕಳೆದುಕೊಂಡಿರುವ ಆರೋಪ ಕೇಳಿ ಬರುತ್ತಿದೆ. ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post