ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ರಾಜ್ಯ ನಾಗರಿಕರ ರಕ್ಷಣಾ ಸಮಿತಿ ವತಿಯಿಂದ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಪ್ರಶಾಂತ್ ಜಿ ಮುನ್ನೋಳಿ ಮತ್ತು ದೊಡ್ಡಪೇಟೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಹರೀಶ್ ಪಾಟೀಲ್, ರಾಜ್ಯ ನಾಗರಿಕರ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಕೆ. ಶೇಖರ್, ರಾಜ್ಯ ಮಹಿಳಾ ಅಧ್ಯಕ್ಷೆ ಉಷಾ ಉತ್ತುಪ್, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ರಾಘವೇಂದ್ರ, ಖಜಾಂಚಿ ಶಿವಮೊಗ್ಗ ವಿನೋದ್, ಸಹ ಕಾರ್ಯದರ್ಶಿ ಸಚಿನ್, ರಾಜ್ಯ ಸಂಘಟನಾ ಕಾರ್ಯದರ್ಶಿ ಹರೀಶ್ ಮತ್ತು ರಮೇಶ್, ರಾಜ್ಯ ಕಾನೂನು ಸಲಹೆಗಾರ ಶಬರೀಶ್ ಶಿವಮೊಗ್ಗ ನಗರ ಘಟಕದ ಸಹಕಾರ್ಯದರ್ಶಿ ಸತೀಶ್, ಸಮಿತಿಯ ಪ್ರಮುಖರಾದ ರಾಜೇಶ್, ಹರ್ಷಿತ್, ರವಿಕುಮಾರ್, ಶಿವಯೋಗಿ, ಚೇತನ್, ಬಸವರಾಜ್ಸಂ, ತೋಷ್ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post