ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಜಿ ಉಪಮುಖ್ಯಮಂತ್ತಿ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ K S Eshwarappa ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನ ಮಾನ ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಧಿಡೀರ್ ಬೆಳವಣಿಗೆಯಲ್ಲಿ ನಿವೃತ್ತಿ ಘೋಷಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಪುತ್ರ ಕೆ.ಇ. ಕಾಂತೇಶ್ ಅವರಿಗೆ ಈಶ್ವರಪ್ಪ ಟಿಕೆಟ್ ಕೇಳಿದ್ದಾರೆ ಎನ್ನಲಾಗಿದ್ದು ಇಂದು ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ.













Discussion about this post