ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೆ #Lok Sabha Election ತಮ್ಮ ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳಲ್ಲಿ ಭರ್ಜರಿ ಮೆರವಣಿಗೆ ನಡೆಸಿದ ಮಾಜಿ ಡಿಸಿಎಂ, ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಅವರು ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ನಗರದ ರಾಮಣ್ಣಶೇಷ್ಠಿ ಪಾರ್ಕ್ ಗಣಪತಿ ದೇವಾಲಯದಲ್ಲಿ ಇಂದು ಮುಂಜಾನೆ ತಮ್ಮ ಕುಟುಂಬಸ್ಥರೊಂದಿಗೆ ಗಣಪತಿಗೆ ಪೂಜೆ ಸಲ್ಲಿಸಿದರು. ನಾಮಪತ್ರ ಹಾಗೂ ದಾಖಲೆಗಳನ್ನು ಗಣಪತಿಯ ಮುಂದಿಟ್ಟು, ಪ್ರಾರ್ಥನೆ ಸಲ್ಲಿಸಿದರು. ವಿಶೇಷವಾಗಿ ನೀನಮ್ಮ ಗೆಲುವಾಗಿ ಬಾ ಹಾಡು ಹಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Also read: ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ಹ್ಯಾಟ್ರಿಕ್ ಸಾಧನೆ | 3ನೇ ವರ್ಷವೂ ಶೇ.100ರಷ್ಟು ಫಲಿತಾಂಶ
ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದಿಂದ ಆಗಮಿಸಿದ್ದ ಸಾವಿರಾರು ಅಭಿಮಾನಿಗಲೂ ಸುಡುವ ಬಿಸಿಲನ್ನೂ ಲೆಕ್ಕಿಸದೇ ನೆರೆದಿದ್ದರು.

ಮೋದಿ ತದ್ರೂಪು ವ್ಯಕ್ತಿ
ಈಶ್ವರಪ್ಪ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ #PM Narendra Modi ಮತ್ತು ಈಶ್ವರಪ್ಪ ಅವರ ಭಾವಚಿತ್ರಗಳಿರುವ ಧ್ವಜಗಳು, ಕೇಸರಿ ಧ್ವಜಗಳು ರಾರಾಜಿಸಿದರೆ, ವಿವಿಧ ಪ್ರಕಾರದ ಕಲಾ ತಂಡಗಳ ಮೆರವಣಿಗೆಗೆ ಮೆರುಗು ನೀಡಿದ್ದವು. ಪ್ರಮುಖವಾಗಿ, ಪ್ರಧಾನಿ ಮೋದಿ ಅವರನ್ನೇ ಹೋಲುವ ವ್ಯಕ್ತಿಯೊಬ್ಬರು ಜನರ ಗಮನ ಸೆಳೆದಿದ್ದು ವಿಶೇಷವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post