ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನೆಹರೂ ಯುವ ಕೇಂದ್ರವು ಗ್ರಾಮೀಣ ಪ್ರದೇಶದ ಯುವಜನರನ್ನು ಕೇಂದ್ರೀಕರಿಸಿಕೊಂಡು ವಿವಿಧ ಜನಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಯುವಕರಿಗೆ ಹಾಗೂ 18ವರ್ಷ ಮೇಲ್ಪಟ್ಟ ಗ್ರಾಮೀಣ ಜನತೆಯ ಸುರಕ್ಷತೆಯ ದೃಷ್ಟಿಯಿಂದ ಕೊರೋನ ನಿಯಂತ್ರಿಸುವ ಭಾಗವಾಗಿ ಆಯೋಜಿಸುವ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ನೆಹರೂ ಯುವ ಕೇಂದ್ರದ ಪ್ರಸಕ್ತ ಸಾಲಿನ ವಾರ್ಷಿಕ ಚಟುವಟಿಕೆಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿ ಮಾತನಾಡುತ್ತಿದ್ದರು. ನೆಹರೂ ಯುವ ಕೇಂದ್ರದ ವತಿಯಿಂದ ಕೈಗೊಂಡಿರುವ ಚಟುವಟಿಕೆಗಳ ಕುರಿತು ಯುವ ಸಮನ್ವಯಾಧಿಕಾರಿ ಕೆ.ಟಿ.ಕೆ.ಉಲ್ಲಾಸ್ ಅವರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಯುವ ಸಮನ್ವಯಾಧಿಕಾರಿ ಉಲ್ಲಾಸ್ ಅವರು ಮಾಹಿತಿ ನೀಡಿ, 2021-22ನೇ ಸಾಲಿನಲ್ಲಿ ಯುವ ಸಮೂಹದ ತರಬೇತಿ ಹಾಗೂ ಯುವಕರ ಮುಂದಾಳತ್ವ ತರಬೇತಿಗಳನ್ನು ಆಯೋಜಿಸಲಾಗುತ್ತಿದೆ. ವಿಶೇಷವಾಗಿ ಕೊರೋನ ನಿಯಂತ್ರಣಕ್ಕೆ ಸಂಬಂಧಿಸಿದಂತೆ 18ವರ್ಷ ಮೇಲ್ಪಟ್ಟ ಯುವ ಸಮೂಹಕ್ಕೆ ಕೊರೋನ ಸೋಂಕಿನಿಂದ ರಕ್ಷಣೆ ಪಡೆಯಲು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕೋವಿಡ್ ಲಸಿಕೆಯನ್ನು ಹಾಕಿಸುವಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಬಳಸುವ ಮಾಸ್ಕ್‌ಗಳು ವ್ಯವಸ್ಥಿತ ವಿಲೇವಾರಿ ಮಾಡಲು ಯುವಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕಾದ ಅಗತ್ಯವಿದ್ದು, ಅದಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದರು.
ಉಳಿದಂತೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಕೆಗಳಲ್ಲಿ ಯುವಕರನ್ನು ಭಾಗವಹಿಸುವಂತೆ ಪ್ರೋತ್ಸಾಹಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಎನ್.ಎಸ್.ಎಸ್. ಹಾಗೂ ಮತ್ತಿತರ ಕ್ರಿಯಾಶೀಲ ಸಂಘಟನೆಗಳ ಸಹಕಾರ ಪಡೆದು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ಅಲ್ಲದೇ ಗ್ರಾಮೀಣ ಸ್ವಚ್ಚತೆ, ಹಸರೀಕರಣ, ಅಂತರ್ಜಲ ಹೆಚ್ಚಳ, ನೀರಿನ ಸಧ್ಬಳಕೆ, ಸಂವಹನ ಮುಂತಾದ ವಿಷಯಗಳಲ್ಲಿ ಯುವ ಮುಂದಾಳತ್ವ ಶಿಬಿರಗಳನ್ನು ಆಯೋಜಿಸಿ ತರಬೇತಿ ನೀಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಸುರೇಶ್, ತಾ.ಪಂ.ಸಹಾಯಕ ನಿರ್ದೇಶಕ ಪಾಂಡುರಂಗರಾವ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಸೇರಿದಂತೆ ವಿವಿಧ ತಾಲೂಕುಗಳ ಯುವ ಸಂಘಟಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post