ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಕಂಟ್ರೋಲ್ ರೂಂಗಳನ್ನು ಸ್ಥಾಪನೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಮಾಹಿತಿ ಪ್ರಕಟಿಸಿದ್ದು, ಜಿಲ್ಲೆಯಲ್ಲಿ 1950 ಸಹಾಯವಾಣಿಯೊಂದಿಗೆ ಶಿವಮೊಗ್ಗ ಗ್ರಾಮಾಂತರ -111 ದೂ.ಸಂ: 08182-200508. ಭದ್ರಾವತಿ-112 08282-263466, ಶಿವಮೊಗ್ಗ-113 08182-277906 ತೀರ್ಥಹಳ್ಳಿ-114 ದೂ.ಸಂ: 08181-200925. ಶಿಕಾರಿಪುರ-115 ದೂ.ಸಂ: 08187-222239. ಸೊರಬ-116 ದೂ.ಸಂ: 08184-272241., ಸಾಗರ-117 ದೂ.ಸಂ: 08183-226601 ಆಗಿದೆ ಎಂದು ತಿಳಿಸಿದ್ದಾರೆ.
ಮಸ್ಟರಿಂಗ್, ಡಿಮಸ್ಟರಿಂಗ್ ಮತ್ತು ಮತ ಎಣಿಕೆ ಸ್ಥಳ
ಶಿವಮೊಗ್ಗ ಗ್ರಾಮಾಂತರ -111 ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಎಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಶಿವಮೊಗ್ಗ
ಭದ್ರಾವತಿ-112 ಸಂಚಿ ಹೊನ್ನಮ್ಮ ಬಾಲಿಕ ಪಪೂ ಕಾಲೇಜು ಭದ್ರಾವತಿ
ಶಿವಮೊಗ್ಗ-113 ಸಹ್ಯಾದ್ರಿ ವಾಣಿಜ್ಯ ಕಾಲೇಜು ಶಿವಮೊಗ್ಗ
ತೀರ್ಥಹಳ್ಳಿ-114 ಯುಆರ್ ಅನಂತಮೂರ್ತಿ ಕಾಲೇಜು ತೀರ್ಥಹಳ್ಳಿ
ಶಿಕಾರಿಪುರ-115 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ
ಸೊರಬ-116 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೊರಬ
ಸಾಗರ-117 ಸರ್ಕಾರಿ ಪದವಿಪೂರ್ವ ಕಾಲೇಜು ಸಾಗರ
ಮತ ಎಣಿಕೆ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ.
ಜಿಲ್ಲೆಯಲ್ಲಿ 2023 ರ ವಿಧಾನ ಸಭಾ ಚುನಾವಣೆಯನ್ನು ವಿದ್ಯುನ್ಮಾನ ಮತಯಂತ್ರ ಬಳಸಿ ನಿರ್ವಹಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 3350 ಬ್ಯಾಲೆಟ್ ಯೂನಿಟ್’ಗಳು, 2352 ಕಂಟ್ರೋಲ್ ಯುನಿಟ್ ಹಾಗೂ 2417 ವಿವಿ ಪ್ಯಾಟ್ ಲಭ್ಯವಿರುತ್ತದೆ.
ಜಿಲ್ಲೆಯಲ್ಲಿ ಚುನಾವಣಾ ದಿನದಂದು ಚುನಾವಣಾ ಕಾರ್ಯ ನಿರ್ವಹಿಸಲು 8520 ಅಧಿಕಾರಿ/ಸಿಬ್ಬಂದಿಗಳ ಅವಶ್ಯಕತೆ ಇದ್ದು ಈಗಾಗಲೇ 10700 ಸಿಬ್ಬಂದಿಗಳ ಮಾಹಿತಿ ಸಂಗ್ರಹಿಸಲಾಗಿದೆ.
ಉಮೇದುವಾರಿಕೆ ಸಲ್ಲಿಕೆಯ ಅವಧಿಯವರೆಗೆ ಅಂದರೆ ಏಪ್ರಿಲ್ 20 ರವರೆಗೆ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು ಹಾಗೂ ನಮೂನೆ 8 ರಲ್ಲಿ ತಿದ್ದುಪಡಿಗೆ ಅವಕಾಶವಿರುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post