ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ವತಿಯಿಂದ ನಿರ್ಮಾಣವಾಗುತ್ತಿರುವ ಕೌಶಲ್ಯ ತರಭೇತಿ ಕೇಂದ್ರ ಮತ್ತು ಮಹಿಳಾ ವಸತಿ ನಿಲಯಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಇಂದು ಬೆಳಿಗ್ಗೆ ಶಂಕುಸ್ಥಾಪನೆ ಮಾಡಿದರು.
ನಂತರ ಸಭೆಯಲ್ಲಿ ಮಾತನಾಡಿದ ಅವರು, ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದರಿಂದ ಮಹಿಳಾ ಸಂಘಟನೆಗಳು ಸದೃಢವಾಗಲು ಅನುಕೂವಾಗುತ್ತದೆ ಎಂದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಇದು ಶಿವಮೊಗ್ಗದಲ್ಲೇ ಪ್ರಪ್ರಥಮಬಾರಿಗೆ ಸ್ಥಾಪನೆ ಆಗುತ್ತಿರುವುದು ನಮ್ಮ ಜಿಲ್ಲೆಯ ಹೆಮ್ಮೆಯ ವಿಷಯವೇ ಸರಿ. ಇನ್ನೂ ಮಹಿಳಾ ವಸತಿ ನಿಲಯ ಸ್ಥಾಪನೆಯಾಗಲಿ. ಇಂದಿನ ಮುಂದುವರೆದ ದಿನಮಾನಗಳಲ್ಲಿ ಮಹಿಳೆಯರು ಸ್ವಾಲಂಬಿಗಳಾಲು ಅನುಕೂಲ ಆಗುವ ನಿಟ್ಟಿನಲ್ಲಿ ಈ ರೀತಿ ದಿಟ್ಟ ಹೆಜ್ಜೆಗಳನ್ನು ಇಡುತ್ತಿರುವುದು ಸಂತೋಷದ ವಿಷಯ ಎಂದು ಸಂತಸ ವ್ಯಕ್ತಪಡಿಸಿದರು.
ಎಲ್ಲರೂ ಒಕ್ಕಟ್ಟಾಗಿ ಕೆಲಸ ಮಾಡುವುದರಿಂದ ಬೇಗ ನಿಮ್ಮ ಕನಸುಗಳು ನನಸಾಗುವದರಲ್ಲಿ ಸಂಶಯವಿಲ್ಲ. ಈ ಯೋಜನೆಗಳ ತಗಲುವ ವೆಚ್ಚ ಮತ್ತು ಇನ್ನಿತರ ಮಾಹಿತಿಗಳನ್ನು ನಮಗೆ ಕೊಡಿ, ಇಲ್ಲಿರುವ ನಾವೆಲ್ಲ ಸೇರಿ ಪಕ್ಷಭೇದ ಮರೆತು ನಿಮ್ಮ ಸಂಸ್ಥೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕೆಲಸ ಕಾರ್ಯ ಮಾಡುತ್ತೇವೆ ಎಂದು ತಿಆಶ್ವಾಸನೆ ನೀಡಿದರು.
ನೀವು ಕೈಗೊಂಡಿರುವ ಕೆಲಸ ಮುಗಿಯುವವೆಗೂ ಸುಮ್ಮನೇ ಕುಳಿತುಕೊಳ್ಳಬಾರದು. ಎಲ್ಲರ ಬೆನ್ನತ್ತಿ ನಿಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಿ ಎಂದು ತಿಳಿಸಿದರು.
ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನಪರಿಷತ್ ಸದಸ್ಯ ರುದ್ರೇಗೌಡರು, ಪ್ರಸನ್ನಕುಮಾರ್ ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post