ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಂತ್ರಜ್ಞಾನದ ಜೊತೆಗೆ ಜಗತ್ತು ಆಧುನಿಕವಾದರೂ ಕೂಡ ಸಮಾಜದಲ್ಲಿ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ ಎಂದು ಭಾವಸಾರ ವಿಷನ್ ಇಂಡಿಯಾ ಸಂಸ್ಥೆ ಅಧ್ಯಕ್ಷೆ ನಂದಾ ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ.
ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ #International Women’s Day ಅಂಗವಾಗಿ ನಗರದ ಗುಡ್ ಲಕ್ ಆರೈಕೆ ಕೇಂದ್ರದ ಮಹಿಳಾ ನಿವಾಸಿಗಳಿಗೆ ಸಹಾಯ ಹಸ್ತ ಚಾಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

Also read: ತುಷ್ಟಿಕರಣದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ | ಶಿವಮೊಗ್ಗ ಜಿಲ್ಲೆಗೆ 0 ಪ್ರಾಮುಖ್ಯತೆ | ಡಿ.ಎಸ್. ಅರುಣ್
ಇನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರತಿವರ್ಷ ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಪ್ರತಿ ಕುಟುಂಬ, ದೇಶದ ದೊಡ್ಡ ಸೈನಿಕ ಶಕ್ತಿ ಎಂದೇ ಮಹಿಳೆಯರನ್ನು ಬಣ್ಣಿಸಲಾಗುತ್ತದೆ. ಇಂದು ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನವಾಗಿಯೂ ಈಗ ಈ ದಿನವನ್ನು ಆಚರಣೆ ಮಾಡಲಾಗುತ್ತಿದ್ದು, ಬಿವಿಐ ಸಂಸ್ಥೆಯೂ ಕೂಡ ಮಹಿಳಾ ದನಾಚರಣೆಯಂದು ಸಹಾಯ ಹಸ್ತ ಚಾಚುತ್ತಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post