ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರಳ, ಸಜ್ಜನಿಕೆಯ ಹಾಗೂ ಸೇವಾ ಮನೋಭಾವವನ್ನು ಹೊಂದಿರುವ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸೋಣ ಎಂದು ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ #S Dattatri ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರ ನಿವಾಸದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರೂ ಎಲ್ಲ ಮತದಾರರನ್ನು ಕರೆ ತಂದು ಮತ ಹಾಕಿಸುವಂತಾಗಬೇಕು, ದೂರ ಪ್ರದೇಶದಲ್ಲಿದ್ದವರಿಗೆ ಹಾಗೂ ವಯೋವೃದ್ಧರಿಗೆ ವಾಹನ ವ್ಯವಸ್ಥೆಗಳ ಮೂಲಕ ಮತಗಟ್ಟೆಗೆ ಕರೆತಂದು, ವಾಪಾಸು ಮನೆಗೆ ಸುರಕ್ಷಿತವಾಗಿ ಕಳಿಸುವಂತಹ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

Also read: ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ: ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ
ಸಭೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಚ್. ಮಾಲತೇಶ್, ಬಿಜೆಪಿ ನಗರಾಧ್ಯಕ್ಷರಾದ ಮೋಹನ ರೆಡ್ಡಿ, ಎನ್ ಡಿ ಸತೀಶ್, ಮಲ್ಲಿಕಾರ್ಜುನ , ಮಹಾಶಕ್ತಿ ಕೇಂದ್ರದ ಪ್ರಮುಖರು ಸೇರಿದಂತೆ ಹಲವರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post