No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರತಿ ಮಾಧ್ಯಮವೂ ಸಮಾಜಕ್ಕೆ ಉತ್ತರದಾಯಿತ್ವವಾದುದು: ಪತ್ರಕರ್ತ ಗೋಪಾಲ್ ಯಡಗೆರೆ ಅಭಿಮತ

kalpa News by kalpa News
August 10, 2021
in ಶಿವಮೊಗ್ಗ
0
ಪ್ರತಿ ಮಾಧ್ಯಮವೂ ಸಮಾಜಕ್ಕೆ ಉತ್ತರದಾಯಿತ್ವವಾದುದು: ಪತ್ರಕರ್ತ ಗೋಪಾಲ್ ಯಡಗೆರೆ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಸಮಾಜ ಮತ್ತು ಪತ್ರಿಕೋದ್ಯಮ ಪರಸ್ಪರ ಪೂರಕವಾಗಿ ಸ್ಪಂದಿಸುತ್ತಾ, ಮುಖಾಮುಖಿಯಾಗುತ್ತಾ ಹೋಗುತ್ತದೆ. ಸಮಾಜಕ್ಕೆ ಪತ್ರಿಕೆಗಳು ಸ್ಪಂದಿಸುವ ರೀತಿಯಲ್ಲಿಯೇ ಸಮಾಜ ಕೂಡ ಪತ್ರಿಕಾ ವರದಿಗಳಿಗೆ ಪ್ರತಿಸ್ಪಂದಿಸಬೇಕು. ಮಾಧ್ಯಮ ಸಮಾಜಕ್ಕೆ ಉತ್ತರದಾಯಿತ್ವ ಆಗಿದ್ದು ತಪ್ಪು ಮಾಡಿದರೆ ಸಮಾಜಕ್ಕೆ ಸ್ಪಷ್ಟನೆ ನೀಡಬೇಕಾಗುತ್ತದೆ ಎಂದು ಹಿರಿಯ ಪತ್ರಕರ್ತ ಹಾಗೂ ಮಾಧ್ಯಮ ಅಕಾಡೆಮಿ ಸದಸ್ಯ ಗೋಪಾಲ್ ಯಡಗೆರೆ ಅಭಿಪ್ರಾಯಪಟ್ಟರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ‘ಪತ್ರಿಕೋದ್ಯಮ ಮತ್ತು ಸಮಾಜ’ ವಿಷಯ ಕುರಿತು ಮಾತನಾಡಿದರು.

ಪತ್ರಿಕೆ ಸಮಾಜದ ಕನ್ನಡಿ ಎಂಬ ಮಾತಿದೆ. ಕೇವಲ ಕನ್ನಡಿ ಮಾತ್ರವಲ್ಲ, ಸಮಾಜದ ಅಂಕುಡೊಂಕುಗಳನ್ನು ತೋರಿಸುವ ವ್ಯವಸ್ಥೆ ಕೂಡ. ಇದು ಮಾಧ್ಯಮಗಳ ಜವಾಬ್ದಾರಿ ಕೂಡ. ಸಮಾಜಕ್ಕೆ ಪೂರಕ ಮಾಹಿತಿ,ಸಂದೇಶದ ಜೊತೆಗೆ ಸಲಹೆಗಳನ್ನು ಕೂಡ ಪತ್ರಿಕೆಗಳು ನೀಡಬೇಕು. ಇದು ಸಮಾಜ ಸುವ್ಯವಸ್ಥಿತವಾಗಿ ನಡೆಯಲು ಸುಲಭವಾಗುತ್ತದೆ. ಪ್ರಭುತ್ವವನ್ನು ಕೂಡ ಸರಿದಾರಿಯಲ್ಲಿ ಕೊಂಡೊಯ್ಯಲು ಸಾಧ್ಯವಾಗುತ್ತದೆ. ಆದರೆ ಇದೇ ಸಂದರ್ಭದಲ್ಲಿ ಪತ್ರಿಕೆಗಳು ಸಮಾಜಕ್ಕೆ ಸಂಬಂಧವಿಲ್ಲದ ಸಂದರ್ಭದಲ್ಲಿ ಯಾವುದೇ ವ್ಯಕ್ತಿಯ ವೈಯುಕ್ತಿಕ ಬದುಕಿನಲ್ಲಿ ಇಣುಕಲು ಅಧಿಕಾರವಿಲ್ಲ. ಇದು ಸರಿಯೂ ಅಲ್ಲ. ಅನಿವಾರ್ಯ ಸಂದರ್ಭದಲ್ಲಿ ಪತ್ರಿಕೆಗಳು ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದರು.

ಸಮಾಜದ ಸ್ವಾಸ್ಥ್ಯ ಕಾಪಾಡುವ ದೃಷ್ಟಿಯಿಂದ ಪತ್ರಿಕೆಗಳು ಕೆಲಸ ನಿರ್ವಹಿಸುತ್ತದೆ. ಆದರೆ ಇದರ ನಡುವೆ ಕೆಲವು ದುಷ್ಟ ವ್ಯಕ್ತಿಗಳು ಪತ್ರಿಕೆಗಳ ಹೆಸರಿನಲ್ಲಿ, ಪತ್ರಕರ್ತರ ಸೋಗಿನಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ, ಜನರ ವೈಯುಕ್ತಿಕ ಬದುಕನ್ನು ಮುಂದಿಟ್ಟುಕೊಂಡು ಬ್ಲಾಕ್‌ಮೇಲ್ ನಡೆಸುತ್ತಿದ್ದಾರೆ. ಇದು ನೈಜ ಪತ್ರಿಕೋದ್ಯಮಕ್ಕೆ ಕಪ್ಪು ಚುಕ್ಕೆ. ಇಂತಹ ಹಳದಿ ಪತ್ರಿಕೋದ್ಯಮದ ಜನರಿಗೆ ಯಾರೂ ಹೆದರಬಾರದು. ಕಾನೂನಿನ ರೀತಿಯಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಬೇಕು. ನಾವು ವೈಯುಕ್ತಿಕ ಬದುಕಿನಲ್ಲಿ ಶುದ್ಧವಾಗಿದ್ದರೆ ಇಂತಹವರಿಗೆ ಹೆದರಬೇಕಾಗಿಲ್ಲ ಎಂದರು.

ಸ್ವಾತಂತ್ರ್ಯ ಪೂರ್ವ ಮತ್ತು ಬಳಿಕದ ಒಂದರೆಡು ದಶಕಗಳಲ್ಲಿ ಪತ್ರಿಕೆಗಳಲ್ಲಿ ಸೇವಾ ಮನೋಭಾವದಿಂದ ಪತ್ರಕರ್ತರು ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಇದೊಂದು ವೃತ್ತಿಯಾಗಿದ್ದು, ಸೂಕ್ತ ಆದಾಯವನ್ನು ಕೂಡ ಪತ್ರಕರ್ತರು ನಿರೀಕ್ಷಿಸುತ್ತಾರೆ. ಹೀಗಾಗಿ ಇದು ಉದ್ಯಮದ ಚೌಕಟ್ಟನ್ನು ಪಡೆಯುತ್ತಿದೆ. ಈ ರೀತಿ ಉದ್ಯಮ ಚೌಕಟ್ಟನ್ನು ಪಡೆದು ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಿದರೆ ಪತ್ರಿಕಾ ಸಂಸ್ಥೆ ಆರೋಗ್ಯಕರ ರೀತಿಯಲ್ಲಿ ಬೆಳೆಯುತ್ತವೆ. ಪತ್ರಿಕಾ ಕಚೇರಿಯಲ್ಲಿ ಕೆಲಸ ಮಾಡುವವರು ಕೂಡ ಉತ್ತಮ ಸಂಬಳ ಮತ್ತಿತರ ಸೌಲಭ್ಯ ಪಡೆಯಲು ಸಾಧ್ಯ. ಹೀಗಾಗಿ ಪತ್ರಿಕೆ ಉದ್ಯಮವಾದರೆ ಸಮಸ್ಯೆಯಿಲ್ಲ, ಆದರೆ ಅದು ಎಂದೂ ಪತ್ರಿಕಾ ಕ್ಷೇತ್ರದ ಮೂಲ ಆಶಯವನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ಮಂಜುನಾಥ್ ಕದಂ ಮಾತನಾಡಿ, ಹಿರಿಯ ಪತ್ರಕರ್ತರಾದ ಗೋಪಾಲ್ ಯಡಗೆರೆ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿದ್ದು, ಈ ಸಂದರ್ಭದಲ್ಲಿ ಅವರನ್ನು ಗೌರವಿಸಲಾಗುತ್ತಿದೆ ಎಂದರು.
ಪತ್ರಿಕೋದ್ಯಮ ಮಾತ್ರವಲ್ಲದೆ, ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಯಡಗೆರೆಯವರ ಸೇವೆ ಇನ್ನಷ್ಟು ಕಾಲ ಬೇಕಾಗಿದೆ. ಇನ್ನಷ್ಟು ಉತ್ತಮ ಸ್ಥಾನ ಪಡೆಯಲಿ ಎಂದು ಆಶಿಸಿದರು.

ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಸತೀಶ್‌ಚಂದ್ರ, ಜಿ. ವಿಜಯ್ ಕುಮಾರ್, ಕಡಿದಾಳ್ ಗೋಪಾಲ್, ವಸಂತ್ ಹೋಬಳಿದಾರ್, ಎಂ.ಪಿ. ನಾಗರಾಜ್, ಇನ್ನರ್‌ವ್ಹೀಲ್ ಸಂಸ್ಥೆಯ ಅಧ್ಯಕ್ಷೆ ಜಯಂತಿ ವಾಲಿ, ಕಾರ್ಯದರ್ಶಿ ಬಿಂದು ವಿಜಯ್‌ಕುಮಾರ್, ಜಿಲ್ಲಾ ಸಂಪಾದಕಿ ಶಬರಿ ಕಡಿದಾಳ್ ಮತ್ತು ಎಲ್ಲಾ ರೋಟರಿ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRotary Shivamogga EastShimogaShivamoggaShivamogga Newsಮಲೆನಾಡು_ಸುದ್ಧಿರೋಟರಿ ಶಿವಮೊಗ್ಗ ಪೂರ್ವಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಗುತ್ತಿಗೆ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ

Next Post

ಪ್ಲೇ ಗರ್ಲ್ ಆಲ್ಬಂ ಸಾಂಗ್ ಚಿತ್ರೀಕರಣ ಮುಕ್ತಾಯ: ಶೀಘ್ರದಲ್ಲೇ ಫಸ್ಟ್ ಲುಕ್ ಬಿಡುಗಡೆ

kalpa News

kalpa News

Next Post
ಪ್ಲೇ ಗರ್ಲ್ ಆಲ್ಬಂ ಸಾಂಗ್ ಚಿತ್ರೀಕರಣ ಮುಕ್ತಾಯ: ಶೀಘ್ರದಲ್ಲೇ ಫಸ್ಟ್ ಲುಕ್ ಬಿಡುಗಡೆ

ಪ್ಲೇ ಗರ್ಲ್ ಆಲ್ಬಂ ಸಾಂಗ್ ಚಿತ್ರೀಕರಣ ಮುಕ್ತಾಯ: ಶೀಘ್ರದಲ್ಲೇ ಫಸ್ಟ್ ಲುಕ್ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL