ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಎಲ್ಲರೂ ಮೆಚ್ಚುವಂತಹ ಜನಪರ ಬಜೆಟ್ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್ ಅಭಿನಂದನೆ ಸಲ್ಲಿಸಿದ್ದಾರೆ.
ಶಿವಮೊಗ್ಗಕ್ಕೆ ಕಿದ್ವಾಯಿ ಆಸ್ಪತ್ರೆ, ಆಯುಷ್ ಕಾಲೇಜ್ ಹಾಗೂ ವಿಮಾನ ನಿಲ್ದಾಣಕ್ಕೆ ರೂ. 384 ಕೋಟಿ ರೂ. ನೀಡಿರುವುದು ಬಹು ದೊಡ್ಡ ಕೊಡುಗೆಯಾಗಿದೆ. ಪ್ರವಾಸೋದ್ಯಮಕ್ಕೆ 2654 ಕೋಟಿ ರೂ. ನೀಡಿರುವುದು ಸ್ವಾಗತಾರ್ಹವಾಗಿದೆ ಎಂದು ಬಜೆಟ್ ಕುರಿತು ಶ್ಲಾಘಿಸಿದ್ದಾರೆ.
ಮಹಿಳಾ ದಿನಾಚರಣೆಯ ದಿನದಂದೇ ಮಂಡಿಸಿರುವ ಈ ರಾಜ್ಯ ಬಜೆಟ್‌ನಲ್ಲಿ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸಿರುವುದು, ಮಹಿಳಾ ಉದ್ಯೋಗಿಗಳಿಗೆ ಹೆರಿಗೆಯ ನಂತರ ಮಕ್ಕಳ ಆರೈಕೆಗೆ 6 ತಿಂಗಳ ರಜೆ ವಿಸ್ತರಣೆ, ಹಾಗೂ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಘೋಷಿಸಿರುವುದು ಮುಖ್ಯಮಂತ್ರಿಗಳಿಗೆ ಮಹಿಳೆಯರ ಬಗೆಗಿನ ಖಾಳಜಿಯನ್ನು ತೋರಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರತೀ ಜಿಲ್ಲೆಗೆ 2 ಶಿಶುಪಾಲನ ಕೇಂದ್ರಗಳು, 60 ಸಾವಿರ ಮಹಿಳೆಯರಿಗೆ ಸ್ವಯಂ ಉದ್ಯೋಗ, ಶಿಕ್ಷಣ ಕ್ಷೇತ್ರದಲ್ಲಿ ಶೌಚಾಲಯಗಳ ಅಭಿವೃದ್ಧಿಗೆ 50 ಕೋಟಿ ರೂ., ಸರ್ಕಾರಿ ಶಾಲೆಗಳ ಪಿಠೋಪಕರಣಗಳಿಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಪ್ರೌಢಶಾಲೆ ಮತ್ತು ಕಾಲೇಜುಗಳ ಕಟ್ಟಡ ನಿರ್ಮಾಣ ಅಭಿವೃದ್ದಿಗೆ 150 ಕೋಟಿ ರೂ. ಅನುದಾನ ನೀಡಿದ್ದಾರೆ. ಹಾಗೂ ರೈಲ್ವೆ ಕಾಮಗಾರಿಯ ಭೂ ಸ್ವಾದೀನಕ್ಕೆ 2630 ಕೋಟಿ ರೂ. ಮೀಸಲು ಇಟ್ಟಿರುವುದು ರೈಲೆ ವಲಯದ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ಹೂ ಮಾರುಕಟ್ಟೆಯ ಅಭಿವೃದ್ದಿಗೆ 50 ಕೋಟಿ ರೂ. ಅನುದಾನ ಹಾಗೂ ಸಾವಯವ ಕೃಷಿಗೆ 500 ಕೋಟಿ ರೂ. ಮೀಸಲಿಟಿರುವುದು ಕೃಷಿಗೆ ನೀಡಿದ ಅದ್ಯತೆಯಾಗಿದ್ದು, ಗ್ರಾಮೀಣ ಪ್ರದೇಶಗಳಿಗೆ 22 ಲಕ್ಷ ನಲ್ಲಿ ಸಂಪರ್ಕ ಕಲ್ಪಿಸಿದೆ. ನಿಗಮ ಮಂಡಳಿಗಳ ಸುಗಮ ಕಾರ್ಯನಿರ್ವಹಣೆಗೆ 500 ಕೋಟಿ ರೂ. ಹಣ ಒದಗಿಸಿರುವುದು ಸಾ ರ್ಗತಾರ್ಹವಾಗಿದ ಎಂದು ಹೇಳಿದ್ದಾರೆ.
ಎಲ್ಲಾ ಸ್ತರದ, ಎಲ್ಲಾ ವರ್ಗದ ಹಾಗೂ ಎಲ್ಲಾ ಕ್ಷೇತ್ರಗಳಿಗೆ ಆದ್ಯತೆ ಮತ್ತು ಸವತೋಲಿತ ಬಜೆಟ್ ಇದಾಗಿದ್ದು, ಕೊರೋನಾ ಆರ್ಥಿಕ ಸಂಕಷ್ಟ್ಟದ ಮಧ್ಯೆಯೂ ಜನಪರ ಬಜೆಟ್ ಮಂಡಿಸಿರುವ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಾಗೂ ಸರ್ಕಾರದ ಎಲ್ಲಾ ಸಚಿವರು ಹಾಗೂ ಇವರಿಗೆ ಸಹಕರಿಸಿದ ಅಧಿಕಾರಿ ವರ್ಗವದವರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಪರವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್ ಅಭಿನಂದಿಸಿದ್ದಾರೆ ಎಂದು ತಿಳಿಸಲಾಗಿದೆ.
ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿಯೂ ಸಹ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದು, ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ., ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಹಾಗೂ ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ದಿಗೆ 200 ಕೋಟಿ ರೂ. ಹಾಗೂ ಅಲ್ಪಸಂಖ್ಯಾತರಿಗೆ 1500 ಕೋಟಿ ರೂ. ಮೀಸಲು ಇರಿಸಲಾಗುವುದು. ಮತ್ತು ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಸ್ಥಾಪಿಸಿ, ನಿಗಮದ ಚಟುವಟಿಕೆಗೆ 500 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಹೇಳಿದ್ದಾರೆ.
ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ., ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ 10ರೂ. ಕೋಟಿ ಅನುದಾನ ಮೀಸಲಿಡಲಾಗಿದೆ. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ನೀಡಲಾಗುತ್ತಿದ್ದು, ಕಿತ್ತೂರು ಕೋಟೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುವುದು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗಾಗಿ ೫ ಕೋಟಿ ರೂ., ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಶ್ರೀಗಳು ಹಾಗೂ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಸ್ಮೃತಿವನಕ್ಕಾಗಿ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲಾ ಸ್ತರದ, ಎಲ್ಲಾ ವರ್ಗದ ಹಾಗೂ ಎಲ್ಲಾ ಕ್ಷೇತ್ರಗಳಿಗೆ ಆದ್ಯತೆ ಮತ್ತು ಸವತೋಲಿತ ಬಜೆಟ್ ಇದಾಗಿದ್ದು, ಕೊರೋನಾ ಆರ್ಥಿಕ ಸಂಕಷ್ಟ್ಟದ ಮಧ್ಯೆಯೂ ಜನಪರ ಬಜೆಟ್ ಮಂಡಿಸಿರುವ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಾಗೂ ಸರ್ಕಾರದ ಎಲ್ಲಾ ಸಚಿವರು ಹಾಗೂ ಇವರಿಗೆ ಸಹಕರಿಸಿದ ಅಧಿಕಾರಿ ವರ್ಗವದವರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಪರವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್ ಅಭಿನಂದಿಸಿದ್ದಾರೆ ಎಂದು ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post