ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೀವನದಲ್ಲಿ ಉತ್ತಮ ಕೆಲಸಗಳನ್ನು ಮಾಡಿದರೆ ಜನರ ಮನಸ್ಸಿನಲ್ಲಿ ಉಳಿಯುತ್ತೇವೆ. ಈ ರೀತಿಯಲ್ಲಿ ನಾಡಪ್ರಭು ಕೆಂಪೇಗೌಡರು Kempegowda ಕೆಲಸ ಮಾಡಿ ಬೆಂಗಳೂರಿಗೆ ಮಹತ್ತರ ಕೊಡುಗೆ ನೀಡಿದ ಕಾರಣ 500 ವರ್ಷ ಕಳೆದರೂ ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ CADA ಅಧ್ಯಕ್ಷರು ಕೆ.ಬಿ ಪವಿತ್ರಾ ರಾಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ, ಶಿವಮೊಗ್ಗ ಇವರ ಆಶ್ರಯದಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ನಗರದ ಕುವೆಂಪು ರಂಗಮಂದಿರದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

Also read: ಎಲ್ಲ ವರ್ಗ, ಜಾತಿಯಲ್ಲಿ ಸಮಾನತೆ ಕಂಡ ಮಹಾನ್ ನಾಯಕ ಕೆಂಪೇಗೌಡರು: ಸಚಿವ ವಿ. ಸೋಮಣ್ಣ
ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್, ಜಿಲ್ಲಾಧಿಕಾರಿ ಡಾ. ಸೇಲ್ವಮಣಿ, ಪೊಲೀಸ್ ಅಧೀಕ್ಷಕ ಬಿ.ಎಂ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಪ್ರಾಂಶುಪಾಲರಾದ ಪ್ರೊ. ಎಂ.ಕೆ. ವೀಣಾ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಉಮೇಶ್ ಮತ್ತಿತರರು ಹಾಜರಿದ್ದರು.










Discussion about this post