ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ಕುರಿತು ನೀಡಿರುವ ತೀರ್ಪು ಸ್ವಾಗತಾರ್ಹ. ಹಿಜಾಬ್ Hijab ಸಮವಸ್ತ್ರದ ಭಾಗವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಈ ತೀರ್ಪು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ Minister Eshwarappa ತಿಳಿಸಿದ್ದಾರೆ.
ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು. ಹಿಜಾಬ್ ಧರಿಸಬೇಕು ಎಂದು ಶಾಲೆಯಿಂದ ದೂರವುಳಿದಿರುವ ವಿದ್ಯಾರ್ಥಿನಿಯರು ಕೂಡಲೇ ಶಾಲೆಗೆ ತೆರಳಬೇಕು ಎಂದು ಕೋರಿದ್ದಾರೆ.
Also read: ಹಿಜಾಬ್ ತೀರ್ಪು ಸ್ವಾಗತಾರ್ಹ: ಸಚಿವ ಆಶ್ವತ್ಥನಾರಾಯಣ, ಸಿ.ಸಿ. ಪಾಟೀಲ ಅಭಿಮತ
ಶಾಂತಿ ಕಾಪಾಡುವಂತೆ ಸಂಸದ ರಾಘವೇಂದ್ರ ಮನವಿ:
ರಾಜ್ಯದ ಉಚ್ಚ ನ್ಯಾಯಾಲಯದ ತ್ರಿಸದಸ್ಯ ಪೀಠವು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪನ್ನು ನೀಡಿದೆ. ರಾಜ್ಯ ಸರ್ಕಾರದ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿಹಿಡಿಯುವುದರ ಮೂಲಕ ಹಿಜಾಬ್ ವಿವಾದಕ್ಕೆ ತೆರೆಯನ್ನು ಎಳೆದಿದೆ. ನ್ಯಾಯಾಲಯದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಎಲ್ಲರೂ ಶಾಂತಿ ಕಾಪಾಡುವಂತೆ ಸಂಸದ ರಾಘವೇಂದ್ರ MP Raghavendra ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post