ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸೂಗುರು ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವೀರೇಶ್ ಕ್ಯಾತನಕೊಪ್ಪ ಹೇಳಿದರು.
ಅವರು ಸೂಗೂರು ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜ್ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡುತ್ತಾ, ಆಧುನಿಕ ಯುಗದಲ್ಲಿ ಎಲ್ಲರೂ ಒತ್ತಡದ ಜೀವನಶೈಲಿ ನಡೆಸುತ್ತಿದ್ದು, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
Also read: ಶಿವಮೊಗ್ಗ | ಸಂಭ್ರಮದ ಹೋಳಿ ಆಚರಣೆಗೆ ಭರದ ಸಿದ್ಧತೆ
ಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯ ಮಾತನಾಡುತ್ತಾ, ಇಂದಿನ ದಿನಗಳಲ್ಲಿ ಆರೋಗ್ಯ ಬಗ್ಗೆ ಎಲ್ಲರಲ್ಲೂ ಕಾಳಜಿ ಹೆಚ್ಚುತ್ತಿದೆ. ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ ಎಂದರು.
ಕಾರ್ಯಕ್ರಮದಲ್ಲಿ ಸೂಗೂರು ಗ್ರಾಮದ ಅಧ್ಯಕ್ಷ ಪ್ರಕಾಶಪ್ಪ, ಗ್ರಾ.ಪಂ.ನ ಮಾಜಿ ಅಧ್ಯಕ್ಷರಾದ ಎಸ್.ಜಿ.ಮಲ್ಲಿಕಾರ್ಜುನ್, ಕೆ.ಪಿ.ಲೋಹಿತ್, ಓಂಕಾರಪ್ಪ, ಉಪಾಧ್ಯಕ್ಷ ಮಧು, ಸದಸ್ಯರಾದ ರೋಹಿಣಿ, ಪ್ರತಿಭಾ, ನೇತ್ರಾವತಿ ರಂಗನಾಥ್, ಲಲಿತಮ್ಮ ಲಕ್ಷ್ಮಣ, ಮಂಜುನಾಥ್ ನವಲಯ್ಯ, ವಿಭಾಗದ ಮುಖ್ಯಸ್ಥರಾದ ಡಾ. ಪ್ರವೀಣ್ ಕುಮಾರ್, ಡಾ. ಅವಿನಾಶ್, ಡಾ. ಕಾವ್ಯ, ವಿವಿದ ವಿಭಾಗದ ಪಿ ಜಿ, ಗೃಹ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post