No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶ ಕಟ್ಟಲು ಎಲ್ಲರೂ ಬಿಜೆಪಿಯನ್ನು ಬೆಂಬಲಿಸಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕರೆ

kalpa News by kalpa News
April 27, 2023
in ಶಿವಮೊಗ್ಗ
0
ದೇಶ ಕಟ್ಟಲು ಎಲ್ಲರೂ ಬಿಜೆಪಿಯನ್ನು ಬೆಂಬಲಿಸಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  |

ತಮಿಳು ಜನರು ನಂಬಿಕಸ್ಥ ಶ್ರಮಿಕರಾಗಿದ್ದು, ಕರ್ನಾಟಕದ ಜನತೆ ಅವರಿಗೆ ಅತ್ಯಂತ ಗೌರವ ನೀಡಿದ್ದಾರೆ. ಅವರು ಕೂಡ ಕನ್ನಡಿಗರಾಗಿಯೇ ಇಲ್ಲಿ ಬೆಳೆದಿದ್ದು, ತಮಿಳುನಾಡು ಮತ್ತು ಕರ್ನಾಟಕದ ರಾಮಸೇತುವಿನಂತೆ ಇಲ್ಲಿ ವಾಸವಾಗಿದ್ದಾರೆ. ದೇಶ ಕಟ್ಟಲು ಎಲ್ಲರೂ ಬಿಜೆಪಿಯನ್ನು ಬೆಂಬಲಿಸಿ ಸುಭದ್ರ ಭಾರತ ಕಟ್ಟಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ Annamalai ಹೇಳಿದ್ದಾರೆ.

ಅವರು ಇಂದು ನಗರದ ಎನ್‌ಇಎಸ್ ಮೈದಾನದಲ್ಲಿ ಬಿಜೆಪಿ ನಗರ ವತಿಯಿಂದ ಹಮ್ಮಿಕೊಂಡಿದ್ದ ತಮಿಳು ಬಾಂಧವರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಈಶ್ವರಪ್ಪನವರು ಕಳೆದ 40 ವರ್ಷಗಳಿಂದ ಪಕ್ಷವನ್ನು ಅರ್ಜುನನಂತೆ ಕಟ್ಟಿ ಬೆಳೆಸಿದ್ದು, ಈಗ ಭೀಷ್ಮರಂತೆ ಚುನಾವಣೆ ರಾಜಕಾರಣದಿಂದ ಹಿಂದೆ ಸರಿದು ಬಿಜೆಪಿಯ ಎಲ್ಲಾ ಕಿರಿಯ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿ ಪಕ್ಷವನ್ನು ಬೆಳೆಸಿ ಮಾದರಿಯಾಗಿದ್ದಾರೆ. ಚನ್ನಬಸಪ್ಪ ಒಬ್ಬ ನಿಷ್ಠಾವಂತೆ ಬಿಜೆಪಿ ಕಾರ್ಯರ್ತನಾಗಿದ್ದು, ಅವರಿಗೆ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಈಗ ನೀವು ಚನ್ನಬಸಪ್ಪನವರಿಗೆ ಕೊಡುವ ಮತ ಈಶ್ವರಪ್ಪನವರಿಗೆ ಮತ್ತು ಯಡಿಯೂರಪ್ಪನವರಿಗೆ ನೀಡುವ ಮತವಾಗಿದೆ ದೇಶದ ಮತ್ತು ರಾಜ್ಯದ ಅಭಿವೃದ್ಧಿಗೆ ನೀಡುವ ಮತವಾಗಿದೆ ಎಂದರು

ಈಶ್ವರಪ್ಪನವರು ಬಿಜೆಪಿ ಹೈಕಮಾಂಡ್‌ಗೆ ಪತ್ರ ಬರೆದು ಕಾರ್ಯಕರ್ತನಿಗೆ ಅಭ್ಯರ್ಥಿಯನ್ನಾಗಿ ಮಾಡುವಂತೆ ಹೇಳಿದ್ದಾರೆ. ಅದರಂತೆ ಚನ್ನಬಸಪ್ಪನವರು ಅಭ್ಯರ್ಥಿಯಾಗಿದ್ದಾರೆ. ಸಂಪೂರ್ಣ ಬಹುಮತ ಬಂದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಆದ್ದರಿಂದ ಕನಿಷ್ಠ 130 ಸ್ಥಾನ ಬಿಜೆಪಿ ಈ ಬಾರಿ ಗೆಲ್ಲಲೇಬೇಕು. ಅದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದರು.
ಇಡೀ ದೇಶಕ್ಕೆ ಈಶ್ವರಪ್ಪನವರು ರೋಲ್ ಮಾಡೆಲ್ ಆಗಿದ್ದಾರೆ. ಮೋದಿಯವರು ವಿಶ್ವಗುರುವಾಗಿ ದೇಶದ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ ಕಾಂಗ್ರೆಸ್‌ನವರು ಎಲ್ಲವನ್ನೂ ಉಚಿತ ಕೊಡುತ್ತೇವೆಂದು ಸುಳ್ಳು ಹೇಳುತ್ತಿದ್ದಾರೆ. ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದಲ್ಲಿ ಅವರು ನೀಡಿದ ಗ್ಯಾರಂಟಿಯ ಬಣ್ಣ ಬಯಲಾಗಿದೆ. ಬಿಜೆಪಿ ಮಾಡಿದ ಅಭಿವೃದ್ಧಿಯನ್ನು ಮತ್ತು ಯೋಜನೆಗಳನ್ನು ನಿಲ್ಲಿಸುತ್ತೇವೆ ಎಂದು ಹೇಳುತ್ತಾ ರಿವರ್ಸ್ ಗೇರ್‌ನಲ್ಲಿ ಹೋಗುತ್ತಿದ್ದಾರೆ. ಆದರೆ ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿ ಮಾಡುತ್ತಾ ಡಬಲ್ ಇಂಜಿನ್ ಸರ್ಕಾರ ಡಬಲ್ ಸ್ಪೀಡ್‌ನಲ್ಲಿ ಹೋಗುತ್ತಿದೆ. ಈಶ್ವರಪ್ಪನವರಿಗೆ ಬಿಜೆಪಿ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ಸ್ಥಾನಮಾನ ನೀಡಿ ಉನ್ನತ ಹುದ್ದೆಯನ್ನು ನೀಡಲಿದೆ ಎಂದರು.

Also read: ಆಮಿಷಗಳಿಗೆ ಒಳಗಾಗದೆ ತಮಗೆ ಸೂಕ್ತವೆನಿಸುವ ಅಭ್ಯರ್ಥಿಗೆ ಮತ ನೀಡಿ: ರಾಹುಲ್ ಶರಣಪ್ಪ ಕರೆ

ಶಾಸಕ ಈಶ್ವರಪ್ಪ MLA Eshwarappa ಮಾತನಾಡಿ, ಒಬ್ಬ ನಿವೃತ್ತ ಐಎಸ್ ಐಪಿಎಸ್ ಅಧಿಕಾರಿ ಸಿಂಗಂ ಎಂದೇ ಖ್ಯಾತರಾದ ಅಣ್ಣಾಮಲೈ ಅವರು ಮೋದಿಯವರ ನಾಯಕತ್ವ ಮತ್ತು ಅವರ ದೂರದೃಷ್ಟಿ ನೋಡಿ ಒಂದು ಸ್ಥಾನವೂ ಇಲ್ಲದ ತಮಿಳುನಾಡಿನಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ನಾಲ್ಕು ಎಂಎಲ್‌ಎಗಳನ್ನು ಗೆಲ್ಲಿಸಿ ಈಗ ತಮಿಳುನಾಡಿನಲ್ಲಿ ಪಕ್ಷವನ್ನು ಭದ್ರವಾಗಿ ಕಟ್ಟುತ್ತಿದ್ದಾರೆ. ಶಾಸಕನಾಗಿ ನಾನು ಎಲ್ಲಾ ಸಮುದಾಯಗಳಿಗೂ ಅನುದಾನ ನೀಡಿದ್ದೇನೆ ಬಿಜೆಪಿ ಸರ್ಕಾರ ಬಂದಾಗ ಮೊಟ್ಟಮೊದಲು ತಿರುವಳ್ಳವರ್ ಪ್ರತಿಮೆಯನ್ನು ಕರ್ನಾಟಕದಲ್ಲಿ ಸ್ಥಾಪಿಸಿ ಸರ್ವಜ್ಞ ಪ್ರತಿಮೆಯನ್ನು ತಮಿಳುನಾಡಿನಲ್ಲಿ ಸ್ಥಾಪಿಸಿ ಎರಡೂ ರಾಜ್ಯಗಳ ಜನರು ಸಹೋದರರಂತೆ ಶಾಂತಿಯಿಂದ ಬಾಳಲು ಬಿಎಸ್‌ವೈ ಸರ್ಕಾರ ಕ್ರಮ ಕೈಗೊಂಡಿತ್ತು. ತಮಿಳು ಕನ್ನಡಿಗರ ಸಂಗಮಕ್ಕೆ ಇದು ದಾರಿಯಾಯಿತು. ಚನ್ನಬಸಪ್ಪನವರು ಕೂಡ ಶಿವಮೊಗ್ಗದ ನಗರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ದೇಶ ಮತ್ತು ಹಿಂದು ಧರ್ಮದ ಕಟ್ಟಾಳುವಾದ ಅವರನ್ನು ಬೆಂಬಲಿಸಿ ನನಗಿಂತ ಹೆಚ್ಚಿನ ಲೀಡಿನಲ್ಲಿ ಗೆಲ್ಲಿಸಬೇಕು. ಅವರು ಗೆದ್ದರೆ ನಾನೇ ಗೆದ್ದ ಹಾಗೆ ನಾವೆಲ್ಲರೂ ಭಾರತೀಯರು. ರಾಷ್ಟ್ರಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದರು.
ಅಭ್ಯರ್ಥಿ ಚನ್ನಬಸಪ್ಪ Channabasappa ಮಾತನಾಡಿ, ದೇಶ ಸುಭಿಕ್ಷವಾಗಿರಬೇಕು. ನಮ್ಮ ಸಂಸ್ಕೃತಿ ಉಳಿಯಬೇಕು ಎಂದು ಜನಸಂಘ ಹುಟ್ಟಿಕೊಂಡಿತು. ವೈಚಾರಿಕ ನೆಲೆಗಟ್ಟಿನಲ್ಲಿ ಪ್ರಾರಂಭವಾದ ಜನಸಂಘ ಬಿಜೆಪಿಯಾಗಿ ನಮ್ಮ ದೇಶದ ಕಾಶ್ಮೀರವನ್ನು ಉಳಿಸಲು ಬಲಿದಾನ ನೀಡಿದೆ. ಅಭಿವೃದ್ಧಿಗ ಮತ್ತೊಂದು ಹೆಸರೇ ಬಿಜೆಪಿ. ಬಿಜೆಪಿ ಗೆಲ್ಲಲು ಎಲ್ಲರೂ ಶಕ್ತಿ ನೀಡಬೇಕು ಎಂದರು.

ತಮಿಳ್ ಸಮಾಜದ ಮುಖಂಡರಾದ ಮಂಜುನಾಥ್ ಪ್ರಾಸ್ತಾವಿಕ ಮಾತನಾಡಿ, ಬಿಎಸ್ವೈ ಮತ್ತು ಕೆ.ಎಸ್. ಈಶ್ವರಪ್ಪ ಇಬ್ಬರೂ ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಮಾಡಿದ್ದು, ತಮಿಳು ಸಮಾಜಕ್ಕೆ ಮೊದಲಿನಿಂದಲೂ ಅನೇಕ ಅನುದಾನ ನೀಡುತ್ತಾ ಬಂದಿದ್ದಾರೆ. ನಾನು ಸಾಯುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ ಮತ್ತು ಬಿಜೆಪಿಯನ್ನು ಬೆಂಬಲಿಸುತ್ತೇನೆ. ತಮಿಳು ಸಮಾಜಕ್ಕೆ ಈ ಇಬ್ಬರು ನಾಯಕರ ಋಣವಿದೆ. ಸಮಾಜ ಬಿಜೆಪಿಯನ್ನು ಬೆಂಬಲಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ನಾಗರಾಜ್, ಜ್ಞಾನೇಶ್ವರ್, ಮೇಯರ್ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಕುಲದೀಪ್ ಸಿಂಗ್, ತಮಿಳುಮುಖಂಡರಾದ ಏಳುಮಲೈ,ಭೂಪಾಲ್ ರಾಜೇಂದ್ರ, ಅರುಣಗಿರಿ, ಬೇಲೂರು ರವಿ, ಶಿವಕುಮಾರ್, ದೊರೆಚಿನ್ನಪ್ಪ, ಮಂಜುನಾಥ್ ಮೊದಲಾದವರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AnnamalaiChannabasappaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA EshwarappaNewsinKannadaNewsKannadaShimogaShivamoggaNewsಅಣ್ಣಾಮಲೈಚನ್ನಬಸಪ್ಪಮಲೆನಾಡು_ಸುದ್ಧಿಶಾಸಕ ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಮಿಷಗಳಿಗೆ ಒಳಗಾಗದೆ ತಮಗೆ ಸೂಕ್ತವೆನಿಸುವ ಅಭ್ಯರ್ಥಿಗೆ ಮತ ನೀಡಿ: ರಾಹುಲ್ ಶರಣಪ್ಪ ಕರೆ

Next Post

ಮೈಸೂರಿನಲ್ಲಿ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ ಮತ್ತು ಶ್ರೀ ವಿದ್ಯಾಮಾನ್ಯರ ಆರಾಧನೋತ್ಸವ

kalpa News

kalpa News

Next Post
ಮೈಸೂರಿನಲ್ಲಿ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ ಮತ್ತು ಶ್ರೀ ವಿದ್ಯಾಮಾನ್ಯರ ಆರಾಧನೋತ್ಸವ

ಮೈಸೂರಿನಲ್ಲಿ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ ಮತ್ತು ಶ್ರೀ ವಿದ್ಯಾಮಾನ್ಯರ ಆರಾಧನೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL