ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುಣಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಇಂದೇ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #KSEshwarappa ಅವರೂ ಸಹ ತಮ್ಮ ಪ್ರಣಾಳಿಕೆಯನ್ನು #Manifesto ಘೋಷಣೆ ಮಾಡುವ ಮೂಲಕ ಟಕ್ಕರ್ ನೀಡಿದ್ದಾರೆ.
ಈ ಕುರಿತಂತೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕೆ.ಎಸ್. ಈಶ್ವರಪ್ಪ ಅವರು, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಘೋಷಿಸುವ ಮೂಲಕ ಬಿ.ಎಸ್. ಯಡಿಯೂರಪ್ಪ #BSYediyurappa ಕುಟುಂಬಕ್ಕೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #BYVijayendra ಅವರ ವಿರುದ್ಧ ಕಿಡಿ ಕಾರಿರುವ ಈಶ್ವರಪ್ಪ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ಮೊದಲು ನಿಲ್ಲಿಸಿ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ #PMNarendraModi ಸೇರಿ ಯಾರೇ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಪುನರುಚ್ಚರಿಸಿದರು.
ಶಿವಮೊಗ್ಗದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ
ಇನ್ನು, ಸಾಗರ ರಸ್ತೆಯಲ್ಲಿರುವ ದ್ವಾರಕ ಕಲ್ಯಾಣ ಮಂದಿರ ಬಳಿ ಶ್ರೀ ದುರ್ಗಾ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಚೌಡೇಶ್ವರಿ ದೇವಿಯ ಆಶೀರ್ವಾದ ಪಡೆದರು.
ಇದೇ ಭಾಗದ ಹಲವು ಕಡೆಗಳಲ್ಲಿ ಮನೆ ಮನೆಗೆ ತೆರಳಿ ಈಶ್ವರಪ್ಪ ಮತಯಾಚನೆ ಮಾಡಿದರು.
ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮನೆ ಮನೆಗೆ ತೆರಳಿ ಕರ ಪತ್ರ ನೀಡಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯ ಇ. ವಿಶ್ವಾಸ್, ರಾಜಾರಾಮ್, ಜೋಡಿಯಾಕ್ ಪ್ರಕಾಶ್ ಸೇರಿದಂತೆ ಬೆಂಬಲಿಗರು ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















