ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗವು ಸೆಫ್ಟಂಬರ್ 18 ಮತ್ತು 19ರಂದು ಜಿಲ್ಲೆಯ ಎಲ್ಲಾ ತಾಲೂಕುಗಳ 21 ಪರೀಕ್ಷಾ ಕೇಂದ್ರಗಳಲ್ಲಿ ಹೈದ್ರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಅವರು ಹೇಳಿದರು.


ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪರೀಕ್ಷಾ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ತಮ್ಮ ಜವಾಬ್ದಾರಿಯರಿತು, ನಿಯಮಾನುಸಾರ ಕಾರ್ಯನಿರ್ವಸುವಂತೆ ಅವರು ಸೂಚಿಸಿದರು.
ಸರ್ಕಾರವು ಹೊರಡಿಸಿರುವ ಕೊರೋನದ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಿ ಪರೀಕ್ಷೆಗಳನ್ನು ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದ ಅವರು, ಕೇಂದ್ರದಲ್ಲಿ “ದ್ಯಾರ್ಥಿಗಳಿಗೆ ಸುರಕ್ಷತಾ ಕ್ರಮವಾಗಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಜರ್ ವ್ಯವಸ್ಥೆ, ಕೊರೋನ ಬಾದಿತ ಅಥವಾ ಶಂಕಿತ ಪರೀಕ್ಷಾರ್ಥಿಗಳಿಗೆ ಪ್ರತ್ಯೇಕವಾದ ಕೊಠಡಿ ವ್ಯವಸ್ಥೆಯನ್ನು ಕಲ್ಪಿಸುವಂತೆ ಸೂಚಿಸಿರುವುದಾಗಿ ಅವರು ತಿಳಿಸಿದರು.



ಈ ಪರೀಕ್ಷೆಗಳು ಯಾವುದೇ ಅಡಚಣೆುಲ್ಲದೆ ನಡೆಯುವಂತೆ ಪ್ರತಿ ಕೇಂದ್ರಕ್ಕೆ ಮೇಲ್ವಿಚಾರಕರು, ತನಿಖಾ ತಂಡ ಹಾಗೂ ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ ಪ್ರದೇಶದಲ್ಲಿನ ಝೆರಾಕ್ಸ್, ಟೈಪಿಂಗ್ ಮಳಿಗೆಗಳನ್ನು ಮುಚ್ಚಿರುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಈ ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್, ಜಿಲ್ಲಾ ಖಜಾನಾಧಿಕಾರಿ ಹೆಚ್.ಎಸ್.ಸಾ”ತ್ರಿ, ಲೋಕಸೇವಾ ಆಯೋಗದ ಪ್ರಾಂತೀಯ ಕಚೇರಿ ಅಧಿಕಾರಿಗಳು ಸೇರಿದಂತೆ ನಿಯೋಜಿತ “”ಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















