ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸದಾಗಿ ಖರೀದಿಸಿ ನೋಂದಣಿಯಾದ ಆಟೋರಿಕ್ಷಾಗಳಿಗೆ ಪರವಾನಿಗೆಯನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸೆಲ್ವಮಣಿ ಆð ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಟೋರಿಕ್ಷಾ ಪರವಾನಗಿ ನೀಡುವ ಕುರಿತು ಏರ್ಪಡಿಸಲಾಗಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದಲ್ಲಿ ನೋಂದಾಯಿತ 304 ಸಂಖ್ಯೆಯ ಆಟೋರಿಕ್ಷಾಗಳಿಗೆ ಪರವಾನಗಿ ಬಾಕಿ ಇದ್ದು ಇವುಗಳಿಗೆ ಪರವಾನಗಿ ನೀಡುವಂತೆ ಸೂಚಿಸಿದರು. ಹಾಗೂ ನಿಯಮದನ್ವಯ 15 ವರ್ಷಗಳಿಗೂ ಮೇಲ್ಪಟ್ಟ ವಾಹನಗಳ ನವೀಕರಣ ಸಾಧ್ಯವಿಲ್ಲವೆಂದು ತಿಳಿಸಿದರು.

Also read: ಶಿವಮೊಗ್ಗ | ಎರಡು ಕಡೆ ಆರಂಭವಾಗಲಿದೆ ಪ್ರೀಪೇಯ್ಡ್ ಆಟೋ ಕೌಂಟರ್ | ಎಲ್ಲೆಲ್ಲಿ?
ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಮಾತನಾಡಿ, ನಗರದಲ್ಲಿ ಕೇವಲ 304 ಅಲ್ಲ, ಸುಮಾರು 1200 ನೋಂದಾಯಿತ ಆಟೋಗಳಿದ್ದು ಅವುಗಳಿಗೆಲ್ಲ ಪರವಾನಗಿ ನೀಡಬೇಕು. ಶೋ ರೂಮಿನವರು ಆಟೋ ಖರೀದಿ ವೇಳೆ ಪರವಾನಗಿ ಕೊಡಿಸುತ್ತೇವೆಂದು 30 ರಿಂದ 40 ಸಾವಿರದವರೆಗೆ ಹಣ ವಸೂಲಿ ಮಾಡುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಹಾಗೂ ಆಟೋ ಚಾಲನೆ ವ್ಯಾಪ್ತಿಯನ್ನು 20 ಕಿ.ಮೀ ವರೆಗೆ ವಿಸ್ತರಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಳು ಪ್ರತಿಕ್ರಿಯಿಸಿ, ಆನ್’ಲೈನ್’ನಲ್ಲಿ ಪರವಾನಗಿ ಬಾಕಿ ಕಡಿಮೆ ತೋರಿಸುತ್ತಿದ್ದು, ಈ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಪರವಾನಗಿ ನೀಡಲಾಗುವುದು. ಹಾಗೂ ಪರವಾನಗಿ ಪಡೆಯದ ಆಟೋಗಳ ನೋಂದಣಿ ನಿಲ್ಲಿಸುವಂತೆ ತಿಳಿಸಿದರು.

ಆಟೋ ಚಾಲಕರು ಮಾತನಾಡಿ, ಆಟೋಗಳಿಗೆ ರೆಟ್ರೊ ಎಲೆಕ್ಟ್ರಿಕ್ ಸ್ಟಿಕ್ಕರ್ ಅಳವಡಿಕೆ ಮಾಡಬೇಕೆಂಬ ನಿಯಮವನ್ನು ತರಲಾಗಿದೆ. ಇದರಿಂದ ಚಾಲಕರಿಗೆ ರೂ.2000 ವರೆಗೆ ಖರ್ಚು ಬರುತ್ತದೆ. ಹಾಗೂ ಎಫ್ಸಿ ವೇಳೆ ಇದರ ಬಿಲ್ಲನ್ನು ಕೇಳಲಾಗುವುದರಿಂದ ತೊಂದರೆ ಆಗುತ್ತಿದ್ದು, ಸ್ಟಿಕ್ಕರ್’ನಿಂದ ವಿನಾಯಿತಿ ಕೋರಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಸ್ಟಿಕ್ಕರ್ ಹಾಕಿಸುವುದು ಒಳ್ಳೆಯದು. ಸ್ಟಿಕ್ಕರ್ ಅಳವಡಿಕೆ ಕುರಿತಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶದಲ್ಲಿನ ಗೊಂದಲದ ಬಗ್ಗೆ ಸಂಬಂಧಿಸಿದ ಆಯುಕ್ತರಿಗೆ ಪತ್ರ ಬರೆದು ಸ್ಪಷ್ಪನೆ ಪಡೆಯಲಾಗುವುದು. ಹಳೇ ಸ್ಟಿಕ್ಕರ್ ಇರುವವರು ಹೊಸದಾಗಿ ಹಾಕಿಸುವ ಅವಶ್ಯಕತೆ ಇಲ್ಲವೆಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post